LATEST NEWS
ಕದನ ಪರಿಸ್ಥಿತಿ – ಉಡುಪಿ ಜಿಲ್ಲೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ – ಜಿಲ್ಲಾಧಿಕಾರಿ

ಉಡುಪಿ ಮೇ 13: ಕದನ ಪರಿಸ್ಥಿತಿ ಇರುವ ಹಿನ್ನೆಲೆ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಕಾಪಾಡಲು ಸೂಚಿಸಲಾಗಿದೆ. ಸುಳ್ಳು ಸುದ್ದಿಗಳು ಹರಡುವವರ ವಿರುದ್ಧ ಕಠಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಕ್ರಮ ದಾಸ್ತಾನು ಹಾಗೂ ಕಳ್ಳ ಸಂತೆ ಮೇಲೆ ನಿಗಾ ವಹಿಸಲಾಗಿದೆ. ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಲು ಎಚ್ಚರಿಕೆ ವಹಿಸಲಾಗುವುದು ಎಂದ ಅವರು, ಸುರಕ್ಷತೆ ಕುರಿತಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಮಾತನಾಡಿ, ಪಾಕ್ ವಿರುದ್ಧ ಯುದ್ಧ ಸನ್ನದ್ಧ ಸ್ಥಿತಿ ಹಿನ್ನೆಲೆ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಗ್ನಿ ಶಾಮಕ ದಳದ ಕೇಂದ್ರಗಳು, 24 ಗಂಟೆಗಳು ಸನ್ನದ್ಧ ಸ್ಥಿತಿಯಲ್ಲಿವೆ. ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು 400 ಕ್ಕೂ ಹೆಚ್ಚು ಸ್ವಯಂ ಸೇವಕರುಗಳನ್ನು ಗುರುತಿಸಲಾಗಿದೆ. ಈಗಾಗಲೆ ಹದಿನೆಂಟು ವರ್ಷ ಮೇಲ್ಪಟ್ಟ ಎನ್.ಎಸ್.ಎಸ್ ಹಾಗೂ ಎನ್.ಸಿ.ಸಿ ಸ್ವಯಂ ಸೇವಕರುಗಳಿಗೂ ತರಬೇತಿ ನೀಡಿ, ಅಗತ್ಯವಿದ್ದಲ್ಲಿ ತುರ್ತು ಸಂದರ್ಭಗಳಲ್ಲಿ ಅವರುಗಳನ್ನು ನಿಯೋಜಿಸಲಾಗುವುದು ಎಂದ ಅವರು, ಕರಾವಳಿ ಕಾವಲು ಪಡೆಯ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದರು.

ಜಿಲ್ಲೆಯಲ್ಲಿನ ಆಸ್ಪತ್ರೆಗಳಲ್ಲಿ ಬೆಡ್‌ಗಳು, ಔಷಧಿಗಳು, ಸಾಕಷ್ಟು ದಾಸ್ತಾನು ಇರುವಂತೆ ಹಾಗೂ ವೈದ್ಯರುಗಳ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗುವುದು. ಯಾವುದೇ ಅನಾಹುತಗಳು ಅಥವಾ ಮತ್ತಿತರ ತೊಂದರೆಗಳಾದ್ದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂ ನಂಬರ್ ಗೆ ಮಾಹಿತಿ ನೀಡಬೇಕು ಎಂದ ಅವರು, ಜಿಲ್ಲೆಯಲ್ಲಿ ಡ್ರೋನ್‌ಗಳ ಬಳಕೆ ಮಾಡುವಂತಿಲ್ಲ. ಜಿಲ್ಲಾಡಳಿತದಿಂದ ಹೊರತುಪಡಿಸಿ, ಮತ್ತಿತರ ಕಡೆಗಳಿಂದ ಬರುವ ಸುಳ್ಳು ಮಾಹಿತಿಗಳನ್ನು ಸಾಮಾಜಿಕ ಜಾಲತಾಣ ಸೇರಿದಂತೆ ಮತ್ತಿತರ ಕಡೆ ಹಂಚಿಕೊಳ್ಳುವಂತಿಲ್ಲ ಎಂದರು. ಸಭೆಯಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು, ಇ.ಓಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.