Connect with us

UDUPI

ಡಿಸಿ ಜಿ. ಜಗದೀಶ್ ಅವರಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿದ ಕೊರೋನಾ ವಾರಿಯರ್ ರಾಜೀವಿ

ಉಡುಪಿ ಅಗಸ್ಟ್ 4 : ಕೊರೋನಾ ವಾರಿಯರ್ ಉಡುಪಿಯ ರಾಜೀವಿ ಡಿಸಿ ಜಿ. ಜಗದೀಶ್ ಅವರಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿಕೊಂಡಿದ್ದಾರೆ. ಹಿರಿಯಡ್ಕ ಸಮೀಪದ ಪೆರ್ಣಂಕಿಲದಿಂದ ತುಂಬು ಗರ್ಭಿಣಿಯನ್ನು ರಾತ್ರಿ ಮೂರು ಗಂಟೆಗೆ ರಾಜೀವಿ ಉಡುಪಿ ನಗರದ ಆಸ್ಪತ್ರೆಗೆ ಸೇರಿಸಿ ಕರ್ತವ್ಯ ಪಾಲಿಸಿದ್ದರು.

ತಾನೇ ಆಟೋ ಚಲಾಯಿಸಿಕೊಂಡು ಹೋದ ಮಹಿಳೆಯ ದಿಟ್ಟತನ ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿತ್ತು. ರಾಜೀವಿ ಗರ್ಭಿಣಿಯನ್ನು ರಾತ್ರಿ ಆಟೋ ಚಲಾಯಿಸಿ ಆಸ್ಪತ್ರೆಗೆ ಸೇರಿಸಿದ ದಿಟ್ಟ ಆಶಾ ಕಾರ್ಯಕರ್ತೆ. ಅವರು ರಾಖಿ ಕಟ್ಟಿದ ಕ್ಷಣ ನಾನು ಭಾವುಕನಾದೆ. ನಿಜಕ್ಕೂ ಸಹ ಕೊರೋನಾ ಎದುರಿಸಲು ಇನ್ನಷ್ಟು ಧೈರ್ಯ ಬಂದಿದೆ ಎಂದು ಡಿಸಿ ತಮ್ಮ ಫೇಸ್ ಬುಕ್ ಪೇಜಲ್ಲಿ ಬರೆದುಕೊಂಡಿದ್ದಾರೆ.

Facebook Comments

comments