LATEST NEWS
ಉಡುಪಿ – ಶಾರದೋತ್ಸವ ವಿಸರ್ಜನಾ ಮೆರವಣಿಗೆ : ಮದ್ಯ ಮಾರಾಟ ನಿಷೇಧ
ಉಡುಪಿ, ಅಕ್ಟೋಬರ್ 11 : ನವರಾತ್ರಿ ಹಬ್ಬದ ಪ್ರಯುಕ್ತ ನಡೆಯಲಿರುವ ಶಾರದೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಅಕ್ಟೋಬರ್ 12 ರಂದು ಕೆಲವು ಪ್ರದೇಶಗಳಲ್ಲಿ ಮದ್ಯಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು, ಯಡ್ತರೆ, ಬೈಂದೂರು ಮತ್ತು ಬಿಜೂರು ಗ್ರಾಮ ಹಾಗೂ ಕುಂದಾಪುರ ನಗರ ಠಾಣಾ ವ್ಯಾಪ್ತಿಯ ಕಸಬಾ, ವಡೇರಹೋಬಳಿ, ಹಂಗಳೂರು ಮತ್ತು ಕೋಟೇಶ್ವರ ಗ್ರಾಮಗಳಲ್ಲಿ ಹಾಗೂ ಅಕ್ಟೋಬರ್ 14 ರಂದು ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ)
ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ನಿಗಧಿಪಡಿಸಿದ ದಿನಾಂಕಗಳಂದು ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ; ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ಬೆಳಗ್ಗೆ 6 ಗಂಟೆಯಿAದ ರಾತ್ರಿ 12 ರ ವರೆಗೆ ನಿಷೇಧಿಸಿ, ಒಣದಿನ ಎಂದು ಘೋಷಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.