ನಾಳೆ ಉಡುಪಿಯಲ್ಲಿ ಸುಮ್ನೆ ಓಡಾಡಿದ್ರೆ ಲಾಠಿ ಮಾತನಾಡುತ್ತೆ…ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ

ಉಡುಪಿ ಮೇ.23: ಉಡುಪಿ ಜಿಲ್ಲೆಯಲ್ಲಿ ಮೇ 23 ರಾತ್ರಿ 7 ಗಂಟೆಯಿoದ ಮೇ 25 ಬೆಳಿಗ್ಗೆ 7 ರವರೆಗೆ 36 ಗಂಟೆಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ಅವಧಿಯಲ್ಲಿ ಅವಶ್ಯಕ ವಸ್ತುಗಳಾದ ಹಾಲು, ದಿನಪತ್ರಿಕೆ, ಔಷಧ ಅಂಗಡಿಗಳು ಮತ್ತು ವೈದ್ಯಕೀಯ ಸೇವೆ ಹಾಗೂ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅನುಮತಿಯಿದ್ದು, ಇತರೆ ಚಟುವಟಿಕೆಗಳಿಗೆ ಅನುಮತಿ ಇಲ್ಲ. ಈಗಾಗಲೇ ತಹಸೀಲ್ದಾರ್ ಅವರಿಂದ ಮದುವೆಗೆ ಅನುಮತಿ ಪಡೆದವವರು ಮಾತ್ರ ಮದುವೆ ಮಾಡಬಹುದು. 50ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದರು.