LATEST NEWS
ರಸ್ತೆ ಕಾಮಗಾರಿ ಮುಗಿಯದಿದ್ದರೆ ಟೋಲ್ ಕಲೆಕ್ಷನ್ ಬಂದ್ – ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ
ರಸ್ತೆ ಕಾಮಗಾರಿ ಮುಗಿಯದಿದ್ದರೆ ಟೋಲ್ ಕಲೆಕ್ಷನ್ ಬಂದ್ – ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ
ಕುಂದಾಪುರ ನವೆಂಬರ್ 5: ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕೆಲಸಗಳನ್ನು ಪೂರ್ಣಗೊಳಿಸದೇ ಇದ್ದರೆ ಟೋಲ್ ಗೇಟ್ ಗಳಲ್ಲಿ ಟೋಲ್ ಸಂಗ್ರಹಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಪಡುಬಿದ್ರಿ ಸೇತುವೆಯನ್ನು ಜನವರಿ ಹಾಗೂ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿಯ ಫ್ಲೈಓವರ್ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಜಗದೀಶ್ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಆದೇಶಿಸಿದ್ದಾರೆ.
ತಾಲೂಕು ಪಂಚಾಯತ್‌ನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಹೆದ್ದಾರಿ ಸಮಸ್ಯೆ ಕುರಿತು ನಡೆಸಿದ ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದವರಿಗೆ ಎಚ್ಚರಿಕೆ ನೀಡಿದರು. ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ತನ್ನ ಅವಧಿಯಲ್ಲಿ ಮಂಜೂರಾಗದ, ಪೂರ್ಣವಾಗದ ಕಾಮಗಾರಿಗಾಗಿ ಜನರಿಂದ ಆಕ್ರೋಶ ಎದುರಿಸಬೇಕಾಗಿ ಬಂದಿದೆ. ನವಯುಗ ಸಂಸ್ಥೆಯವರನ್ನು ದೇಶದಲ್ಲೆಡೆ ಕಪ್ಪುಪಟ್ಟಿಗೆ ಸೇರಿಸಲಾಗಿದೆ.
ಬೆಂಗಳೂರಿನಲ್ಲಿ ಹೆದ್ದಾರಿ ಅಭಿವೃದ್ಧಿ ಬಗ್ಗೆ ಪ್ರಾಧಿಕಾರದ ರಾಜ್ಯ ನಿರ್ದೇಶಕರು, ಕೇಂದ್ರ ನಿರ್ದೇಶಕರು, ಲೋಕೋಪಯೋಗಿ ಸಚಿವರು, ಲೋಕೋಪಯೋಗಿ ಇಲಾಖಾ ಕಾರ್ಯದರ್ಶಿ, ಶಾಸಕರು, ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಸಭೆ ಕರೆಯಲಾಗುವುದು ಎಂದರು.