Connect with us

UDUPI

14 ದಿನ ಉಡುಪಿ ಜಿಲ್ಲೆಯ ಎಲ್ಲಾ ಗಡಿ ಸಂಪೂರ್ಣ ಬಂದ್

ಉಡುಪಿ, ಜುಲೈ 14: ಕೊರೊನಾ ನಿಯಂತ್ರಣದ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬದಲು 14 ದಿನಗಳವರೆಗೆ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಸಂಪೂರ್ಣ ಬಂದ್ ಮಾಡಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಜಿಲ್ಲೆಯ ಎಲ್ಲಾ ಶಾಸಕರ ಹಾಗೂ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.


ಉಡುಪಿ ಜಿಲ್ಲಾ ಗಡಿಭಾಗದಿಂದ ಹೊರಗೆ ಹೋಗುವವರಿಗೆ ಮತ್ತು ಒಳಗೆ ಬರುವವರಿಗೆ ಜುಲೈ 15 ರ ಬುಧವಾರ ರಾತ್ರಿ 8:00 ಗಂಟೆಯವರೆಗೆ ಅವಕಾಶ ಕಲ್ಪಿಸಲು ಹಾಗೂ ನಾಳೆಯಿಂದ ಬಸ್ ಸಹಿತ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ತೀರ್ಮನಿಸಲಾಗಿದೆ. ಇದರೊಂದಿಗೆ ರಾಜ್ಯ ಸರ್ಕಾರದ ಹಿಂದಿನ ಆದೇಶದಂತೆ ಭಾನುವಾರ ಸಂಪೂರ್ಣ ಲಾಕ್ಡೌನ್ ಯಥಾಸ್ಥಿತಿ ಮುಂದುವರೆಯಲಿದೆ.

Facebook Comments

comments