Connect with us

    LATEST NEWS

    ವ್ಯಾಪಾರಕ್ಕೆ ಅವಕಾಶ ನೀಡುವಂತೆ ಪೇಜಾವರ ಶ್ರೀಗಳಿಗೆ ಮುಸ್ಲಿಂ ವರ್ತಕರ ಮನವಿ

    ಉಡುಪಿ ಮಾರ್ಚ್ 30: ಉಡುಪಿಯಲ್ಲಿ ಜಾತ್ರೆಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ಬಹಿಷ್ಕಾರ ಮಾಡಿರುವ ಹಿನ್ನಲೆ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಮುಸಲ್ಮಾನ ವರ್ತಕರು ಮನವಿ ಮಾಡಿದರು.


    ಪೇಜಾವರ ಶ್ರೀಗಳನ್ನು ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಭೇಟಿ ಮಾಡಿದ ಮುಸಲ್ಮಾನರು ಮತ್ತು ಕ್ರೈಸ್ತ ಮುಖಂಡರು ವ್ಯಾಪಾರ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿರುವುದರಿಂದ ಬೀದಿಬದಿ ಜಾತ್ರೆ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿದರು. ಈ ಬಗ್ಗೆ ಮಾತನಾಡಿದ ಪೇಜಾವರ ಶ್ರೀಗಳು ಶಾಂತಿ-ಸಾಮರಸ್ಯ ಸೌಹಾರ್ದ ನೆಮ್ಮದಿ ಅವಶ್ಯವಾಗಿ ಬೇಕು, ಒಂದು ಗುಂಪಿನಿಂದ ಸಾಮರಸ್ಯ ಸಾಧ್ಯವಿಲ್ಲ ಹಿಂದೂ ಸಮಾಜ ಬಹಳ ಕಾಲದಿಂದ ನೋವನ್ನು ಉಂಡಿದೆ. ಹಲವು ಅಹಿತಕರ ಘಟನೆಗಳಿಂದ ಹಿಂದೂ ಸಮಾಜ ಬಹಳ ನೋವಿನಲ್ಲಿದೆ. ನಾಲ್ಕು ಮಂದಿ ಧಾರ್ಮಿಕ ಮುಖಂಡರು ಕುಳಿತು ಮಾತನಾಡುವುದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ. ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ.

    ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ. ಹಿಂದೂ ಸಮಾಜ ನೋವು ಉಂಡು ಉಂಡು ಬೇಸರವಾಗಿ ಇಂದು ಸ್ಫೋಟಗೊಂಡಿದೆ. ಈ ಬೆಳವಣಿಗೆಗೆ ಕಾರಣ ಏನು ಎಂಬುದು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚೆ ಮಾಡಬೇಕು. ಹಿಂದೂ ಸಮಾಜಕ್ಕೆ ನೋವಾಗುವ ಯಾವುದೇ ಘಟನೆಗಳು ನಡೆಯದಿದ್ದರೆ ಸಾಮರಸ್ಯ ಬೆಳೆಯಬಹುದು ಎಂದರು.

     

    Share Information
    Advertisement
    Click to comment

    You must be logged in to post a comment Login

    Leave a Reply