Connect with us

UDUPI

ಮತ ಮಾರಿಕೊಳ್ಳಬೇಡಿ : ನ್ಯಾ.ಶಾಂತವೀರ ಶಿವಪ್ಪ

ಉಡುಪಿ, ಏಪ್ರಿಲ್ 27 :ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮಅಭ್ಯರ್ಥಿಗೆ ಮತಚಲಾಯಿಸುವಂತೆಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು.


ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ, ಮತದಾನ ಜಾಗೃತಿ ಸಾರುವ ಟ್ಯಾಬ್ಲೋ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಚುನಾವಣೆಯಲ್ಲಿ ಬಹುತೇಕ ಯುವಜನತೆ ಮೊದಲ ಬಾರಿಗೆ ಮತ ಚಲಾಯಿಸುವ ಸಂಭ್ರಮದಲ್ಲಿದ್ದು, ಯಾವುದೇ ಆಮಿಷಗಳಿಗೆ ಬಲಿಯಾಗದೇ, ತಮ್ಮ ಮುಂದಿನ ಭವಿಷ್ಯಕ್ಕೆಉತ್ತಮ ಯೋಜನೆ ರೂಪಿಸುವ, ಉದ್ಯೋಗ ಸೃಷ್ಠಿಸುವ ಆಲೋಚನೆಯಿರುವ, ಪ್ರಾಮಾಣಿಕ ಮತ್ತು ನೈತಿಕತೆಯಿರುವ ಅಭ್ಯರ್ಥಿಗೆ ಮತ ನೀಡುವುದರ ಮೂಲಕ ತಮ್ಮ ಹಕ್ಕು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ವಿದ್ಯಾರ್ಥಿನಿಯರಿಗೆ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದ ಜಿಲ್ಲಾಧಿಕಾರಿಕೂರ್ಮಾರಾವ್ ಎಂ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಜನತೆ ಮತದಾರರ ಪಟ್ಟಿಗೆತಮ್ಮ ಹೆಸರು ನೊಂದಣಿ ಮಾಡಿದ್ದು, ಇದರಿಂದ ಜಿಲ್ಲೆಗೆ ಚುನಾವಣಾ ಆಯೋಗದಿಂದ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಸಹ ಬಂದಿದೆ. ಮತದಾನ ದಿನದಂದು ಜಿಲ್ಲೆಯ ಎಲ್ಲಾ ಯುವಜನತೆ ತಪ್ಪದೇ ತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ವಾಗುವಂತೆ ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾಎಸ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಉಡುಪಿ ನಗರಸಭೆಯ ಪೌರಾಯುಕ್ತ ರಮೇಶ್ ನಾಯಕ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಮತ್ತಿತರರು ಭಾಗವಹಿಸಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *