Connect with us

    LATEST NEWS

    ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್ – ಆರೋಪಿಗಳು ಅರೆಸ್ಟ್

    ಉಡುಪಿ, ಜೂನ್​ 18: ಸುಶಿಕ್ಷಿತರ ಜಿಲ್ಲೆ ಉಡುಪಿಯಲ್ಲಿ ಇದೀಗ ಪುಡಿ ರೌಡಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಇತ್ತೀಚೆಗೆ ನಡೆದ ಗ್ಯಾಂಗ್ ವಾರ್ ಪ್ರಕರಣದ ಬಳಿಕ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ತಂಡವೊಂದು ಇನ್ನೊಂದು ತಂಡದ ಮೇಲೆ ಹಲ್ಲೆಗೆ ಯತ್ನಿಸಿದ ವಿಡಿಯೋ ಇದೀಗ ವೈರಲ್ ಆಗಿದೆ. ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ.


    ವೈರಲ್ ಆಗಿರುವ ವಿಡಿಯೋ ಜೂನ್ 15ರ ರಾತ್ರಿ ನಡೆದಿದೆ ಎಂದು ಹೇಳಲಾಗಿದೆ. ಪುತ್ತೂರಿನ ಸೆಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದಿದ್ದನು. ಈ ವಿಚಾರ ತಿಳಿದ ಪ್ರವೀಣ್ ಮತ್ತು ಈತನ ಗ್ಯಾಂಗ್ ಮಾತುಕತೆಗೆಂದು ಚರಣ್​ನನ್ನು ಉಡುಪಿ ನಗರದ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಕರೆದಿದ್ದರು.

    ಚರಣ್ ತನ್ನ ಮೂವರು ಸ್ನೇಹಿತರ ಜೊತೆಗೂಡಿ ಆಗಮಿಸಿದ್ದನು. ಪ್ರವೀಣ್ ಆ್ಯಂಡ್​ ಟೀಂ ಇವರ ತಲವಾರು ಬೀಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದಕ್ಕೆ ಪ್ರವೀಣ್​​ ಮತ್ತು ಆತನ ಟೀಂ ಆತನ ಬೈಕ್ ಮೇಲೆ ತಲವಾರಿನಿಂದ ಹಾನಿ ಮಾಡಿದ್ದಾರೆ. ಪುಂಡರು ತಾವು ಕೃತ್ಯವೆಸಗಿರುವ ದೃಶ್ಯವನ್ನು ವೀಡಿಯೋ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ಈಗಾಗಲೇ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ, ಒಟ್ಟಾರೆ ಸುಶಿಕ್ಷಿತರ ನಾಡಾಗಿದ್ದ ಉಡುಪಿ ಜಿಲ್ಲೆಯಲ್ಲಿ ಇದೀಗ ಗ್ಯಾಂಗ್ ವಾರ್ ಗಳ ಸುದ್ದಿ ಹೆಚ್ಚಾಗುತ್ತಿದೆ. ಹೆಚ್ಚುತ್ತಿರುವ ಗ್ಯಾಂಗ್ ವಾರ್​ನಿಂದ ಉಡುಪಿ ನಗರದ ಜನತೆ ಭಯ ಭೀತರಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply