UDUPI
ಹಿರಿಯಡ್ಕ ಅಪ್ರಾಪ್ತೆ ಬಾಲಕಿ ಅಪಹರಣ – ಆರೋಪಿ ಬಂಧನಕ್ಕೆ ಆಗ್ರಹಿಸಿ ಬೀದಿಗಿಳಿದ ಹಿಂದೂಪರ ಸಂಘಟನೆಗಳು
ಉಡುಪಿ ಅಕ್ಟೋಬರ್ 31: ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕನೊಬ್ಬ ಅಪಹರಣ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಘಟನೆ ನಡೆದು ಮೂರು ದಿನ ಕಳೆದರೂ ಪತ್ತೆಯಾಗದೆ ಇರುವುದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೀದಿಗಿಳಿದಿದೆ. ಹಿರಿಯಡ್ಕ ಪೊಲೀಸ್ ಠಾಣೆ ಮುಂಭಾಗ ಮುನ್ನೂರಕ್ಕೂ ಹೆಚ್ಚು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಜಮಾಯಿಸಿದ್ದರು. ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಣ ಮಾಡಿದ್ದಾನೆ. ಇದೊಂದು ಲವ್ ಜಿಹಾದ್ ಎಂದು ಸಂಘಟನೆಯ ಪ್ರಮುಖರು ಆಪಾದಿಸಿದ್ದಾರೆ. ಈ ಘಟನೆಗೆ ಯಾರೆಲ್ಲಾ ಕುಮ್ಮಕ್ಕು ನೀಡಿದ್ದಾರೆ ಎಲ್ಲರನ್ನೂ ತಕ್ಷಣಕ್ಕೆ ಬಂಧಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಉಪ ಪೊಲೀಸ್ ವರಿಷ್ಠಾಧಿಕಾರಿ ಮೂಲಕ ಮನವಿಯನ್ನು ಸಲ್ಲಿಸಿದರು.
ಮನವಿ ಸ್ವೀಕರಿಸಿ ಉಪ ಪೊಲೀಸ್ ಅಧೀಕ್ಷಕ ಜೈಶಂಕರ್ ಮಾತನಾಡಿ ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಸಿಸಿಟಿವಿ ಫುಟೇಜ್ ಈಗಾಗಲೇ ಲಭ್ಯವಾಗಿದ್ದು ಆರೋಪಿಯ ಚಲನವಲನಗಳ ಬಗ್ಗೆ ನಿಗಾ ಇರಿಸಲಾಗಿದೆ ಸದ್ಯದಲ್ಲೇ ಆರೋಪಿಯನ್ನು ಬಂಧಿಸಲಾಗುವುದು.
ತನಿಖೆಯ ಬಗ್ಗೆ ಈಗಾಗಲೇ ಏನು ಹೇಳಲಿಕ್ಕೆ ಆಗುವುದಿಲ್ಲ ಇದರಿಂದ ಆರೋಪಗಳಿಗೆ ಅನುಕೂಲವಾಗಬಹುದು ಆರೋಪಿಯನ್ನು ತಕ್ಷಣ ಬಂಧಿಸುವ ವಿಶ್ವಾಸ ನಮಗಿದೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದರು. ಆರೋಪಿ ಬಂಧನ ಶೀಘ್ರ ಆಗದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ಕೊಟ್ಟರು.
Facebook Comments
You may like
-
ಖಾಸಗಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಆರೆಸ್ಟ್ – ಪೊಲೀಸರ ಎದುರೇ ಕಪಾಳಕ್ಕೆ ಬಾರಿಸಿದ ಯುವತಿ
-
ಕುಂಜಿಬೆಟ್ಟು ಚಾಮುಂಡಿಶ್ವೇರಿ ಗುಡಿಯ ಗರ್ಭಗುಡಿಯೊಳಗೆ ನಾಗರಹಾವಿನ ರಕ್ಷಣೆ
-
ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಪೋಸ್ಟ್
-
ಸಿಟಿಬಸ್ ಚಾಲಕನ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆ – ಶೀಘ್ರ ಆರೋಪಿಗಳ ಬಂಧನಕ್ಕೆ ಒತ್ತಾಯ
-
ಧಾರ್ಮಿಕ ಕೇಂದ್ರಗಳಲ್ಲಿ ದುಷ್ಕರ್ಮಿಗಳ ವಿಕೃತಿ – ಪೊಲೀಸ್ ಆಯುಕ್ತರಿಂದ ಪರಿಶೀಲನೆ
-
ಕೊಣಾಜೆ ಮುಲಾರ ಗೋಪಾಲಕೃಷ್ಣ ಭಜನಾ ಮಂದಿರ ಭಗವಾ ಧ್ವಜದ ಮೇಲೆ ವಿಕೃತಿ ಮೆರೆದ ದುಷ್ಕರ್ಮಿಗಳು
You must be logged in to post a comment Login