ಉಡುಪಿ ಜೂನ್ 08: ಉಡುಪಿ ಜಿಲ್ಲೆಯಲ್ಲಿ 9 ರಿಂದ 11 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಿನ್ನೆ ಸಂಜೆಯಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ.

ಸಂಜೆಯಾಗುತ್ತಿದ್ದಂತೆ ಗುಡುಗು ಸಿಡಿಲು ಸಹಿತ ಮಳೆ ಸುರಿದಿದೆ. ಈ ನಡುವೆ ಹವಮಾನ ಇಲಾಖೆ 9 ರಿಂದ 11 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ತಿಳಿಸಿದೆ.