LATEST NEWS
ಉಡುಪಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ – ಹಲವೆಡೆ ಹಾನಿ
ಉಡುಪಿ ಜುಲೈ 25: ಉಡುಪಿ ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಮಳೆ ಜೊತೆ ಗಾಳಿ ಬೀಸುತ್ತಿದ್ದು, ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ಹಲವೆಡೆ 41ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ. ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಕುಂದಾಪುರ , ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 25.07.2024 ರಂದು ರಜೆಯನ್ನು ತಾಲ್ಲೂಕಿನ ತಹಶೀಲ್ದಾರ್ ಗಳು ಘೋಷಣೆ ಮಾಡಿದ್ದಾರೆ.
ಹಲವು ಕಡೆಗಳಲ್ಲಿ ಬಿಟ್ಟುಬಿಟ್ಟು ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಮಳೆಗೆ ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ಹಲವೆಡೆ 41ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ.
ಕುಂದಾಪುರ ತಾಲೂಕಿನಲ್ಲಿ 7 ಮಂದಿ ಕೃಷಿಕರ ಅಡಕೆ ತೋಟಗಳಿಗೆ ಅಪಾರ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 45.7 ಮಿ. ಮೀ. ಸರಾಸರಿ ಮಳೆಯಾಗಿದೆ.
ಮಣಿಪಾಲದಲ್ಲಿ ಕಾರಿನ ಮೇಲೆ ಬೃಹತ್ ಬ್ಯಾನರ್ ಬಿದ್ದ ಘಟನೆ ಸಂಭ ವಿಸಿದೆ. ಮಣಿಪಾಲ ಡಿಸಿ ಕಚೇರಿ ರಸ್ತೆಯ ಬದಿಯಲ್ಲಿ ಕಾರೊಂದನ್ನು ನಿಲ್ಲಿಸಲಾಗಿತ್ತು. ಸಂಜೆ ಸುರಿದ ಗಾಳಿ ಮಳೆಗೆ ಜಾಹೀರಾತು ಹೋರ್ಡಿಂಗ್ ಅಳವವಡಿಸಲಾಗಿದ್ದು, ಅದರ ಮೇಲೆ ಬ್ಯಾನರ್ ಬಿದ್ದಿದೆ.