LATEST NEWS
ಉಡುಪಿ – ಮಳೆ ಹಿನ್ನಲೆ ನಾಳೆ (ಜುಲೈ 25) ರಂದು ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ ಜುಲೈ 24: ಉಡುಪಿ ಜಿಲ್ಲೆಯಲ್ಲೂ ಮಳೆ ಅಬ್ಬರ ಮುಂದುವರೆದಿದ್ದು ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ನಾಳೆ (ಜುಲೈ 25) ರಂದು ಎಲ್ಲಾ ಶಾಲಾ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಈ ಹಿನ್ನಲೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ , ಪದವಿ ಪೂರ್ವ ಕಾಲೇಜು ಗಳಿಗೆ ನಾಳೆ (ಜುಲೈ 25) ರಂದು ರಜೆ ಘೋಷಿಸಿ ಆದೇಶಿಸಿದ್ದಾರೆ.

ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು , ಹಳ್ಳಗಳು ,ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು , ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.