LATEST NEWS
ಉಡುಪಿ : ಬೈಕ್ ಸವಾರ ಮುಹಮ್ಮದ್ ಫರ್ವೇಝ್ ಜೀವ ತೆಗೆದ ಹೆದ್ದಾರಿ ಡಿವೈಡರ್..!

ಉಡುಪಿ : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ದ ಸಮೀಪ ತಲ್ಲೂರು ಹೇರಿಕುದ್ರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

ಬೈಂದೂರು ಸಮೀಪದ ನಾಗೂರಿನ ಹಾಗೂ ಪ್ರಸಕ್ತ ಕುಂದಾಪುರ ನಿವಾಸಿಯಾಗಿದ್ದ ಮುಹಮ್ಮದ್ ಫರ್ವೇಝ್(37) ಮೃತ ವ್ಯಕ್ತಿಯಾಗಿದ್ದಾರೆ.
ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಇವರು, ಉತ್ತಮ ಕ್ರೀಡಾಪಟುವಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಈ ಘಟನೆ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
Continue Reading