Connect with us

LATEST NEWS

ಉಡುಪಿ ಮಿಲಾಗ್ರಿಸ್ ಕಾಲೇಜಿನಲ್ಲಿ ಹಿಜಬ್ ಗೆ ನಿರ್ಬಂಧ

ಉಡಪಿ ಫೆಬ್ರವರಿ 18: ಉಡುಪಿಯಲ್ಲಿ ಮತ್ತೊಂದು ಕಾಲೇಜು ಇದೀಗ ಹಿಜಬ್ ಧರಿಸಿ ಬಂದ ವಿಧ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ನಿರ್ಬಂಧ ವಿದಿಸಿದೆ.


ಉಡುಪಿಯ ಮಿಲಾಗ್ರಿಸ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಕಾಲೇಜು ಗೇಟ್‌ನಲ್ಲಿ ನೂರಾರು ವಿದ್ಯಾರ್ಥಿಗಳು ಜಮಾಯಿಸಿದ್ದರು. ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಮತ್ತು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದಕ್ಕೆ ಅವರ ಪ್ರವೇಶವನ್ನು ನಿರಾಕರಿಸಲಾಗಿದ್ದು, ಕಳೆದ ಮೂರು ದಿನಗಳಿಂದ ಈ ರೀತಿ ಕ್ರಮ ಅನುಸರಿಸಲಾಗುತ್ತಿದ್ದು, ಈ ಹಿಂದೆ ಕಾಲೇಜು ತರಗತಿಯೊಳಗೆ ಹಿಜಾಬ್‌ಗೆ ಅವಕಾಶ ನೀಡಿತ್ತು, ಆದರೆ ಈಗ ಹೈಕೋರ್ಟ್‌ನ ಮಧ್ಯಂತರ ಆದೇಶ ಮತ್ತು ಕರ್ನಾಟಕ ಸರ್ಕಾರದ ಸೂಚನೆಗಳನ್ನು ಅನುಸರಿಸಿ ಅದನ್ನು ನಿರ್ಬಂಧಿಸಲಾಗಿದೆ ಎಂದು ಹೇಳಲಾಗಿದೆ.


ಈ ಹಿನ್ನಲೆ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ಕಾಲೇಜು ಗೇಟ್ ಹೊರಗೆ ನಿಂತಿರುವುದು ಕಂಡುಬಂದಿದ್ದು, ವಿಧ್ಯಾರ್ಥಿಗಳು ಕಂಪೌಂಡ್ ಹೊರಗೆ ನಿಂತು ಕಾಲೇಜಿನ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ.

Advertisement
Click to comment

You must be logged in to post a comment Login

Leave a Reply