LATEST NEWS
ಉಡುಪಿ : ಮಣಿಪಾಲದಲ್ಲಿ ಹೋಟೆಲ್ ನೌಕರನ ಕುತ್ತಿಗೆ ಕೊಯ್ದು ಬರ್ಬರ ಕೊಲೆ..!
ಊಡುಪಿ : ಹೋಟೆಲ್ ನೌಕರರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆ ಮಣಿಪಾಲ (Manipal) ಈಶ್ವರನಗರದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಹೊನ್ನಾವರ ಕಾಸರಗೋಡಿನ ಶ್ರೀಧರ್ ನಾಯಕ(35) ಮೃತ ಹೋಟೆಲ್ ಕಾರ್ಮಿಕನಾಗಿದ್ದಾನೆ. ಶ್ರೀಧರ ಅವರು ಮಣಿಪಾಲದಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದರು ಇವತ್ತು ಬೆಳಿಗ್ಗೆ ದುಷ್ಕರ್ಮಿಗಳು ಕುತ್ತಿಗೆಯನ್ನು ಬಿಯರ್ ಬಾಟಲಿಯಿಂದ ಕೊಯ್ದು ಹತ್ಯೆ ಮಾಡಿದ್ದಾರೆ. ಕೊಲೆ ಯಾವ ಕಾರಣಕ್ಕೆ ನಡೆದಿದೆ ಮತ್ತು ಯಾರು ಮಾಡಿದ್ದಾರೆ ಎಂಬುದು ಪೊಲೀಸ್ ವಿಚಾರಣೆಯಲ್ಲಿ ಗೊತ್ತಾಗಬೇಕಿದೆ. ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್, ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮೂರರಿಂದ ನಾಲ್ಕು ಜನರಿದ್ದ ತಂಡ ಬೆಳಿಗ್ಗೆ ಆರರ ಸುಮಾರಿಗೆ ಹೊಡೆದಾಟ ನಡೆಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದು, ಯಾವುದೋ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಶ್ರೀಧರ್ ಅವರನ್ನು ತಂಡ ಬಿಯರ್ ಬಾಟಲಿಯಲ್ಲಿ ಹೊಡೆದು ಹತ್ಯೆಗೈದಿದ್ದಾರೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.
Pingback: ಪುತ್ತೂರು - ನೆಲ್ಲಿಕಟ್ಟೆ ನಾಗನಕಟ್ಟೆಗೆ ನುಗ್ಗಿ ಅನ್ಯಮತೀಯ ಯುವಕನಿಂದ ದಾಂಧಲೆ - themangaloremirror.in