UDUPI
ಉಡುಪಿ : ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶ. ಇಬ್ಬರ ವಿರುದ್ಧ ಪ್ರಕರಣ.!
ಉಡುಪಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನುಪಡುಬಿದ್ರೆ ಪೊಲೀಸರು ವಶಕ್ಕೆ ಪಡೆದಿದ್ದು ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ನಯಾತ್ ಕಟ್ಟಡದ ಮುಂಭಾಗ ಕದ್ದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್, ಮರಳು ಸಹಿತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಟಿಪ್ಪರ್ ಮಾಲಕ ಗುರುಪುರದ ರಾಜೇಶ್ ಹಾಗೂ ಅದರ ಚಾಲಕ ನಂದಿಕೂರು ದೇವಸ್ಥಾನ ಬಳಿಯ ನಿವಾಸಿ ಸರ್ಫ್ರಾಜ್ ವಿರುದ್ದ ಪಡಿಬಿದ್ರೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಟಿಪ್ಪರ್ ಮಾಲಿಕನ ಸೂಚನೆಯಂತೆ ವಾಹನದಲ್ಲಿ ಮರಳು ತುಂಬಿಸಿ ಪಡುಬಿದ್ರಿ ಬೀಚ್ ಕಡೆ ಸಾಗಿಸಲು ಹೋಗುತ್ತಿದ್ದ ಟಿಪ್ಪರನ್ನು ಪಡುಬಿದ್ರಿ ಪಿಎಸ್ ಐ ಪ್ರಸನ್ನ ಎಂ.ಎಸ್, ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಯುನಿಟ್ ಮರಳು ಪತ್ತೆಯಾಗಿದ್ದು, ಈ ಮರಳಿಗೆ ಪರ್ಮಿಟ್ ಆಗಲಿ ಪರವಾನಿಗೆ ಸಹಿತ ವಾಹನಕ್ಕೆ ಸಂಬಂಧಿಸಿದ ಯಾವುದೇ ದಾಖಲಾತಿ ಇರದಿರುವ ಕಾರಣ ಮರಳು ಸಹಿತ ವಾಹನವನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದ್ದಾರೆ.