LATEST NEWS
ಉಡುಪಿ : ಹಾಡ ಹಗಲೇ ಮನೆಗೆ ಕನ್ನ ಹಾಕಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು
ಉಡುಪಿ : ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದಕ್ಕೆ ಕಳ್ಳರು ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಉಡುಪಿ(udupi) ಜಿಲ್ಲೆಯ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ನಡೆದಿದೆ.
ಮನೆಯ ಬಾಗಿಲನ್ನೇ ಒಡೆದು ಹಾಕಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ನಗದು ದೋಚಿ ಪರಾರಿಯಾಗಿದ್ದಾರೆ. ಜಗದೀಶ್ ಚಂದ್ರ ನಾಯರ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಜಗದೀಶ್ ಚಂದ್ರ ಹಾಗೂ ಪತ್ನಿ ಮನೆಯಲ್ಲಿ ಊಟ ಮಾಡಿ ಪ್ರೆಸ್ ಗೆ ಹೋಗಿದ್ದರು. ಸಂಜೆ 4 ಗಂಟೆ ಸುಮಾರಿಗೆ ಜಗದೀಶ್ ಅವರ ಪತ್ನಿ ಮಗಳನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಾಗ ಅನುಮಾನ ಬಂದು ಹಿಂಬದಿ ಹೋಗಿ ನೋಡಿದಾಗ ಮನೆಯ ಹಿಂಬಾಗಿಲು ಒಡೆದು ನಗ ನಗದು ಲೂಟಿ ಮಾಡಿದ ವಿಚಾರ ಬೆಳಕಿಗೆ ಬಂದಿದೆ. ಕುಂದಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.
You must be logged in to post a comment Login