LATEST NEWS
ಸಮುದಾಯ ಆರೋಗ್ಯ ಕೇಂದ್ರ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಾಗಿ ಜನರಿಗೆ ಉತ್ತಮ ಸೇವೆ ನೀಡಲಿ – ಜಯಮಾಲಾ
ಸಮುದಾಯ ಆರೋಗ್ಯ ಕೇಂದ್ರ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಾಗಿ ಜನರಿಗೆ ಉತ್ತಮ ಸೇವೆ ನೀಡಲಿ – ಜಯಮಾಲಾ
ಉಡುಪಿ, ಮಾರ್ಚ್ 2: ನೂತನವಾಗಿ ಆರಂಭಗೊಂಡಿರುವ ಸಮುದಾಯ ಆರೋಗ್ಯ ಕೇಂದ್ರ ಮುಂದಿನ ದಿನಗಳಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಾಗಿ ಜನರಿಗೆ ಉತ್ತಮ ಸೇವೆ ನೀಡುವಂತಾಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಹಾರೈಸಿದರು.
ಅವರು ಶನಿವಾರ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಉಡುಪಿ, ಕರ್ನಾಟಕ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಮತ್ತು ಸುಧಾರಣೆ ಯೋಜನೆಯ ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಬ್ರಹ್ಮಾವರ ಭಾಗದಲ್ಲಿ ಯಾವುದೇ ತುರ್ತು ಸಂದರ್ಭದಲ್ಲಿ ತಕ್ಷಣದಲ್ಲಿ ಚಿಕಿತ್ಸೆ ನೀಡಲು ಸಹಕಾರಿಯಾಗುವಂತೆ ಈ ಸಮುದಾಯ ಆರೋಗ್ಯ ಕೇಂದ್ರ ಪ್ರತಿಯೊಂದು ವಿಭಾಗಕ್ಕೂ ವೈದ್ಯರು ಹಾಗೂ ಸಿಬ್ಬಂದಿಗಳ ಪೂರೈಕೆ ಹಾಗೂ ಸಿಬ್ಬಂದಿಗಳಿಗೆ ಉಳಿದುಕೊಳ್ಳುವ ವ್ಯವಸ್ಥೆಯನ್ನು ಮಾಡಲಾಗಿದೆ. ಆಸ್ಪತ್ರೆಯಲ್ಲಿ ಎಲ್ಲಾ ತುರ್ತು ಚಿಕಿತ್ಸೆಗಳಿಗೆ ಅನುಕೂಲವಾಗುವಂತ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕಾಗಿದೆ.
ಆಸ್ಪತ್ರೆಯಲ್ಲಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ಎಲ್ಲಾ ಸಮಸ್ಯೆಗಳ ಬಗೆಹರಿಸುವಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ಬೇರೆಡೆಗೆ ಪ್ರಭಾರವಾಗಿ ಹೋಗಿರುವ ಸ್ತ್ರೀ ರೋಗ ತಜ್ಞರನ್ನು ಮರಳಿಕರೆತರುವುದು ಅಥವಾ ಆ ಜಾಗಕ್ಕೆ ಬೇರೆಯವರನ್ನು 3 ತಿಂಗಳ ಮಟ್ಟಿಗೆ ನಿಯೋಜಿಸಲಾಗುದು.
ಸ್ವಚ್ಚತೆಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಸ್ವಚ್ಚತಾ ಸಿಬ್ಬಂದಿಯನ್ನು ನೇಮಿಸುವ ಕೆಲಸವಾಗಲಿದೆ. ಆಸ್ಪತ್ರೆಯ ವೈದ್ಯರು ಸ್ಥಳೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಕುರಿತು ಗಮನ ಹರಿಸಬೇಕು. ಹಾಗೂ ಕುಗ್ರಾಮಗಳಿಗೆ ಪ್ರಥಮ ಆದ್ಯತೆ ನೀಡಿ ಸೇವೆ ಸಲ್ಲಿಸಬೇಕು. ವೈದ್ಯರು, ನರ್ಸ್ಗಳು ಹಾಗೂ ಸಿಬ್ಬಂದಿಗಳ ನಡುವೆ ಸಹಕಾರ ಇದ್ದಾಗ ಮಾತ್ರ ಉತ್ತಮ ಚಿಕಿತ್ಸೆ ನೀಡಲು ಸಾಧ್ಯ. ಈ ಭಾಗದ ಜನರು ಸುಸಜ್ಜಿತ ಈ ಆಸ್ಪತ್ರೆಯ ಸೇವೆಯ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.