LATEST NEWS
ಉಡುಪಿ ಪತ್ರಕರ್ತರಿದ್ದ ಕಾರು ಪಲ್ಟಿ – ನಾಲ್ವರಿಗೆ ಗಾಯ

ಸಕಲೇಶಪುರ ಮಾರ್ಚ್ 30: ಬೆಂಗಳೂರಿನಿಂದ ಉಡುಪಿ ಗೆ ಬರುತ್ತಿರುವ ವೇಳೆ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಪತ್ರಕರ್ತರಿಗೆ ಗಾಯಗಳಾದ ಘಟನೆ ಶನಿವಾರ ಸಂಜೆ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ನಡೆದಿದೆ. ನಾಲ್ವರು ಪತ್ರಕರ್ತರಲ್ಲಿ ಒಬ್ಬರು ಗಂಭೀರ ಗಾಯಗೊಂಡಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಆಲೂರು ತಾಲ್ಲೂಕಿನ ಪಾಳ್ಯ ಬಳಿಯ ಶ್ರೀ ಶನೀಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪತ್ರಕರ್ತರು ಉಡುಪಿಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇಟಿವಿ ಭಾರತ್ ವರದಿಗಾರ ಸಂದೀಪ್ ಗಂಭೀರ ಗಾಯಗೊಂಡರೆ, ಪ್ರಜಾ ಟಿವಿ ವರದಿಗಾರರಾದ ಜಯಂತ್, ಸ್ಪಂದನ ಚಾನೆಲ್ ನ ನಾಗರಾಜ್ ಮತ್ತು ಸುದರ್ಶನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರಿಗೂ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಘಟನೆ ಸಕಲೇಶಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
