Connect with us

LATEST NEWS

ಉಡುಪಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ಉಡುಪಿ ನವೆಂಬರ್ 1: 65ನೇ ಕನ್ನಡ ರಾಜ್ಯೋತ್ಸವ ಉಡುಪಿ ಜಿಲ್ಲೆಯಲ್ಲಿ ಸರಳವಾಗಿ ನಡೆಯಿತು. ಜಿಲ್ಲಾಧಿಕಾರಿ ಜಿ ಜಗದೀಶ್ ರಾಷ್ಟ್ರ ಧ್ವಜಾರೋಹಣ ಮಾಡಿ , ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಕನ್ನಡ ರಾಜ್ಯೋತ್ಸವ ಸಂದರ್ಭ ವಿವಿಧ ತಂಡಗಳಿಂದ ಪಥಸಂಚಲನ ಮತ್ತು ಗೌರವ ವಂದನೆ ಸಲ್ಲಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 36 ಮಂದಿ ಸಾಧಕರಿಗೆ ನಾಲ್ಕು ಸಂಘ-ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಸನ್ಮಾನ ಈ ಸಂದರ್ಭದಲ್ಲಿ ನಡೆಯಿತು.


ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಗೈರು ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರೇ ರಾಜ್ಯೋತ್ಸವದ ಸಂದೇಶವನ್ನು ನೀಡಿದರು. ಉಡುಪಿ ಜಿಲ್ಲೆ ಘೋಷಣೆಯಾಗಿ 23 ವರ್ಷ ಕಳೆದಿದ್ದು, ಈವರೆಗೆ ತಾಲೂಕು ಆಸ್ಪತ್ರೆ ಜಿಲ್ಲಾಸ್ಪತ್ರೆ ಯಾಗಿ ಕಾರ್ಯನಿರ್ವಹಿಸುತ್ತಿತ್ತು. ಮುಂದಿನ ಒಂದು ವರ್ಷದಲ್ಲಿ 250 ಬೆಡ್ ಗಳ ನೂತನ ಕಟ್ಟಡ ಜೊತೆ ಸುಸಜ್ಜಿತ ಜಿಲ್ಲಾಸ್ಪತ್ರೆ ಪೂರ್ಣಗೊಳ್ಳುತ್ತದೆ ಎಂದು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಭರವಸೆ ನೀಡಿದರು.


ಬೈಂದೂರು ತಾಲೂಕಿನಲ್ಲಿ ಪಡುವರಿ, ಯಡ್ತರೆ, ಬೈಂದೂರು ಗ್ರಾಮಗಳನ್ನು ಒಳಗೊಂಡಂತೆ ಪಟ್ಟಣ ಪಂಚಾಯತ್ ರಚನೆಯಾಗುತ್ತದೆ. ಜಿಲ್ಲೆಯ ಪಡುಬಿದ್ರಿ ಎಂಡ್ ಪಾಯಿಂಟ್ ಬೀಚ್ ಗೆ ಅಂತರರಾಷ್ಟ್ರೀಯ ಮಾನ್ಯತೆ ಯಾದ ಬ್ಲೂ ಫ್ಲಾಗ್ ಗೌರವ ಸಿಕ್ಕಿದೆ. ಜಿಲ್ಲೆಯ ಇತರೆ ಬೀಚ್ ಗಳಿಗೂ ಅಂತರರಾಷ್ಟ್ರೀಯ ಮಾನ್ಯತೆ ಸಿಗಲು ಜಿಲ್ಲಾಡಳಿತ ಪ್ರಯತ್ನ ನಡೆಸುವುದಾಗಿ ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *