Connect with us

    LATEST NEWS

    ಉಡುಪಿ : ಕಾಪು ಮನೆ ಕಳ್ಳತನ ಪ್ರಕರಣದ ಆರೋಪಿ ಬಂಧನ-5.5 ಲಕ್ಷದ ಚಿನ್ನಾಭರಣ ವಶಕ್ಕೆ..!

    ಉಡುಪಿ ಕಾಪು ಉದ್ಯಾವರ ನಿವಾಸಿ ಅನಿತಾ ಡಿಸಿಲ್ವಾ ರವರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಭರಣ ಕಳವುಗೈದ ಪ್ರಕರಣದ ಆರೋಪಿಯನ್ನು ಬಂದಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ.

    ಉಡುಪಿ : ಉಡುಪಿ ಕಾಪು ಉದ್ಯಾವರ ನಿವಾಸಿ ಅನಿತಾ ಡಿಸಿಲ್ವಾ ರವರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಭರಣ ಕಳವುಗೈದ ಪ್ರಕರಣದ ಆರೋಪಿಯನ್ನು ಬಂದಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ.

    ಕಾಪು ಏಣಗುಡ್ಡೆ ಗ್ರಾಮದ ನಿವಾಸಿ ಜೋನ್ ಪ್ರಜ್ವಲ್ ಫೆರ್ನಾಂಡಿಸ್ (32) ಬಂಧಿತ ಆರೋಪಿಯಾಗಿದ್ದಾನೆ.

    ಜುಲೈ 17 ರಂದು ಉದ್ಯಾವರ ನಿವಾಸಿ ಅನಿತಾ ಡಿಸಿಲ್ವಾ ರವರ ಮನೆಯಲ್ಲಿ ಮಧ್ಯಾಹ್ನ 1:00 ಗಂಟೆಯಿಂದ ಸಂಜೆ 05:00 ಗಂಟೆಯ ಮಧ್ಯದಲ್ಲಿ ಯಾರೋ ಕಳ್ಳರು ಮನೆಯ ಕಪಾಟಿನ ಲಾಕರ್ ನ್ನು ಮುರಿದು ಪಿರ್ಯಾದಿದಾರರು ಚಿನ್ನಾಭರಣ ಇಟ್ಟಿದ್ದ ಪೆಟ್ಟಿಗೆಯಲ್ಲಿದ್ದ ಅಂದಾಜು 5,50,000/- ರೂ ಮಾಡಿರುವ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿರುವ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಈ ಬಗ್ಗೆ ತನಿಖೆ ನಡೆಸಿದ  ಕಾಪು ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply