LATEST NEWS
ಉಡುಪಿ : ಮರ್ಯಾದೆಗೆ ಅಂಜಿ ಮನನೊಂದು ಜೀವಾಂತ್ಯ ಮಾಡಿದ್ರಾ ಕಾಪು ಲೀಲಾಧರಶೆಟ್ಟಿ ದಂಪತಿ..!?
ಉಡುಪಿ ಜಿಲ್ಲೆಯ ಕಾಪು ರಂಗ ತರಂಗ ನಾಟಕ ತಂಡದ ಯಜಮಾನ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆಗೆ ಕಾರಣ ಸಿಕ್ಕಿದೆ.
ಉಡುಪಿ : ಉಡುಪಿ ಜಿಲ್ಲೆಯ ಕಾಪು ರಂಗ ತರಂಗ ನಾಟಕ ತಂಡದ ಯಜಮಾನ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆಗೆ ಕಾರಣ ಸಿಕ್ಕಿದೆ.
ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದಂಪತಿಗೆ ಮಕ್ಕಳಿಲ್ಲದ ಕಾರಣ ಸುಮಾರು 16 ವರ್ಷದ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ತೆಗೆದುಕೊಂಡಿದ್ದರು. ಆದರೆ ಆಕೆ ಮನೆ ಬಿಟ್ಟು ಹೋಗಿದ್ದಳು. ಈ ವಿಚಾರ ಲೀಲಾಧರ ಶೆಟ್ಟಿ ಹಾಗೂ ವಸುಂಧರಾ ಎಲ್ ಶೆಟ್ಟಿರವರಿಗೆ ಅಘಾತ ತಂದಿತ್ತು. ಸಮಾಜದ ಮುಂದೆ ಹೇಗೆ ನಡೆದಾಡುವುದು ಎಂದು ಚಿಂತಿತರಾಗಿದ್ದಾರು ಎನ್ನಲಾಗಿದೆ. ಆದ್ದರಿಂದ ಸಮಾಜಕ್ಕೆ ಹೆದರಿ, ಮರ್ಯಾದೆಗೆ ಅಂಜಿ ಮನನೊಂದು ಮಂಗಳವಾರ ತಡರಾತ್ರಿ ಮಜೂರು ಗ್ರಾಮದ ಕರಂದಾಡಿ ತನ್ನ ಮನೆಯ ಮಲಗುವ ಕೋಣೆಯಲ್ಲಿನ ಕಬ್ಬಿಣದ ಪಕ್ಕಾಸಿಗೆ ನೈಲಾನ್ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬೀಗಿದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣಾ ಯು.ಡಿ.ಆರ್ ಕ್ರಮಾಂಕ 42/2023 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿದೆ.
ಸಮಾಜಮುಖಿ ಕಾರ್ಯಗಳಿಂದ ಕಾಪು ಭಾಗದಲ್ಲಿ ಲೀಲಣ್ಣ ಎಂದೇ ಪ್ರಸಿದ್ಧಿ ಪಡೆದಿದ್ದ ಲೀಲಾಧರ ಶೆಟ್ಟಿ ಕಲೆ, ಸಂಸ್ಕೃತಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರು. ಕಾಪು ರಂಗ ತರಂಗ ನಾಟಕ ತಂಡವನ್ನು ಕಟ್ಟಿಕೊಂಡು ಹಲವು ಕಡೆಗಳಲ್ಲಿ ಪ್ರದರ್ಶನ ನೀಡುತ್ತಿದ್ದರು. ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಲೀಲಾಧರ ಶೆಟ್ಟಿ ಕಾಪು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಒಮ್ಮೆ ಮಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದರು. ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಲೀಲಾಧರ ಶೆಟ್ಟಿ ಕರಂದಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರಾಗಿದ್ದರು.