LATEST NEWS
ಪೇಜಾವರ ಶ್ರೀಗಳ ಆರೋಗ್ಯ ಸ್ಥಿರ -ತುರ್ತು ನೆರವು ಅಗತ್ಯವಿದ್ದರೆ ತಿಳಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಪೇಜಾವರ ಶ್ರೀಗಳ ಆರೋಗ್ಯ ಸ್ಥಿರ -ತುರ್ತು ನೆರವು ಅಗತ್ಯವಿದ್ದರೆ ತಿಳಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಉಡುಪಿ ಡಿಸೆಂಬರ್ 21: ಉಸಿರಾಟದ ತೊಂದರೆಯಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಶನಿವಾರ ಬೆಳಿಗ್ಗೆ ಪೇಜಾವರ ಶ್ರೀಗಳ ಆಪ್ತಕಾರ್ಯದರ್ಶಿಗೆ ಕರೆ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಪೇಜಾವರ ಶ್ರೀಗಳಂತವರು ಲಕ್ಷಕ್ಕೊಬ್ಬರು ಮಾತ್ರ ಈ ಭೂಮಿಯಲ್ಲಿ ಹುಟ್ಟಿ ಬರುತ್ತಾರೆ. ಅವರ ಕ್ಷೇಮಕ್ಕಾಗಿ ಪ್ರಾರ್ಥಿಸುವುದು ಇಡೀ ಸಮಾಜದ ಕರ್ತವ್ಯ ಎಂದು ನಿರ್ಮಲಾ ಸೀತರಾಮನ್ ಹೇಳಿದ್ದಾರೆ.

ಪೇಜಾವರ ಶ್ರೀಗಳ ಆರೋಗ್ಯ ಸಂಬಂಧಿಸಿದಂತೆ ಯಾವುದೇ ತುರ್ತು ನೆರವು ಅಗತ್ಯವಿದ್ದಲ್ಲಿ ತಿಳಿಸುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೂಚಿಸಿದ್ದಾರೆ ಎಂದು ವರದಿಯಾಗಿದೆ.