ನಡುರಾತ್ರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದವರು ಸುಪ್ರೀಂ ಮದ್ಯ ಪ್ರವೇಶಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ – ಕೋಟ ಶ್ರೀನಿವಾಸ ಪೂಜಾರಿ

ಉಡುಪಿ ಜುಲೈ 13: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸಮತ ಸಾಬೀತು ಮಾಡುವ ಸಂದರ್ಭದಲ್ಲಿ ವಿಪಕ್ಷವಾಗಿ ಅವರು ನಡುರಾತ್ರಿ ಕೋರ್ಟ್ ಮೆಟ್ಟಿಲೇರಿ 48 ಗಂಟೆಯಲ್ಲಿ ಸಾಬೀತು ಮಾಡುವ ನಿರ್ದೇಶನ ಪಡೆದು ಸುಪ್ರೀಂ ಆದೇಶ ಪಾಲನೆ ಮಾಡಿದವರು ಇಂದು ಸುಪ್ರೀಂ ಮದ್ಯ ಪ್ರವೇಶಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಮ್ಮಿಶ್ರ ಸರಕಾರ ಬಹುಮತ ಕಳೆದುಕೊಂಡಿದ್ದು ಖಚಿತವಾಗಿದ್ದು, ಬಹುಮತ ಇಲ್ಲದ ಪಕ್ಷಿವನ್ನು ಸದನದಲ್ಲಿ ಬಿಜೆಪಿ ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ನೆಪಗಳನ್ನು ಹೇಳದೆ ಸಿಎಂ ಕುಮಾರಸ್ವಾಮಿ ತಕ್ಷಣ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು. ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂ ಕೋರ್ಟ್ ವ್ಯಾಪ್ತಿಯನ್ನು ಪ್ರಶ್ನೆ ಮಾಡುತ್ತಿದ್ದಾರೆ.

ಸರ್ಕಾರ ಶಾಸಕರ ಮೇಲೆ ಎಸಿಬಿ ಪ್ರಯೋಗ ಮಾಡಿ ಒತ್ತಡ ಹಾಕಲು ಪ್ರಯತ್ನ ಮಾಡುತ್ತಿದೆ. ಎಸಿಬಿ ಮುಖ್ಯಸ್ಥನಾಗಿ ನಿಂಬಾಳ್ಕರ್ ಇದ್ದಾರೆ, ಅವರನ್ನು ಬಳಸಿ ರಾಜೀನಾಮೆ ಕೊಟ್ಟ ಶಾಸಕರನ್ನು ಬಗ್ಗುಬಡಿಯಲು ಎಸಿಬಿ ಬಳಸುವ ಆತಂಕ ಇದೆ. ರಾಜ್ಯದಲ್ಲಿ ಉಂಡು ಹೋದ ಕೊಂಡೂ ಹೋದ ಸರ್ಕಾರ ಇದೆ. ರೇವಣ್ಣ ಹಸ್ತಕ್ಷೇಪ ಮಾಡಿ ಸಾವಿರಾರು ಕೋಟಿ ದಂಧೆ ಮಾಡಿದ್ದಾರೆ. ಸ್ವತಃ ಶಾಸಕ ಮುನಿರತ್ನ ಅವರೇ ಆರೋಪಿಸುತ್ತಿದ್ದಾರೆ.

ಲೋಕೋಪಯೋಗಿ ಮಂತ್ರಿ 800 ಎಂಜಿನಿಯರ್‍ ಗಳ ವರ್ಗಾವಣೆ ಮಾಡಿದ್ದಾರೆ. ಬಹುಮತ ಕಳೆದುಕೊಂಡ ಸರ್ಕಾರದ ಮಂತ್ರಿಯಿಂದ ಅಕ್ರಮವಾಗಿದೆ. ರೇವಣ್ಣ ನೂರಾರು ಕೋಟಿ ಕಮಿಷನ್ ಹೊಡೆದ ಸಂಶಯ ಇದೆ. ಪೊಲೀಸ್ ಇಲಾಖೆಯ ವರ್ಗಾವಣೆ ತಡೆಹಿಡಿಯಲಾಗಿದೆ. ಎಂಜಿನಿಯರ್‍ ಗಳ ವರ್ಗಾವಣೆಯನ್ನೂ ತಕ್ಷಣ ತಡೆಹಿಡಿಬೇಕು. ಈ ಬಗ್ಗೆ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್‍ ಗೆ ಕೋಟ ಒತ್ತಾಯ ಮಾಡಿದ್ದಾರೆ.

Facebook Comments

comments