Connect with us

    LATEST NEWS

    ಉಡುಪಿಯಲ್ಲಿ ನಾಳೆ ಕೃಷ್ಣ ಜನ್ಮಾಷ್ಟಮಿ – ಸಾರ್ವಜನಿಕರಿಗೆ ನಿರ್ಬಂಧ

    ಉಡುಪಿ: ಜಿಲ್ಲೆಯಲ್ಲಿ ಗುರುವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಲಿದೆ. ಕೃಷ್ಣನ ಜನ್ಮಾಷ್ಟಮಿ ನಂತರದ ಶುಕ್ರವಾರ ರಥಬೀದಿಯಲ್ಲಿ ವಿಟ್ಲಪಿಂಡಿ ಮಹೋತ್ಸವ ನಡೆಯಲಿದೆ. ಆದರೆ ಎರಡೂ ದಿನದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವ ಅವಕಾಶ ಇಲ್ಲ.

    ಸೆಪ್ಟೆಂಬರ್ 21ರವರೆಗೆ ನೂರು ಜನ ಸೇರುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ. ಹೀಗಾಗಿ ಉಡುಪಿ ಕೃಷ್ಣಮಠ ಕೋವಿಡ್ 19 ನ ಹಿಂದಿನ ಸೂಚನೆಯನ್ನೇ ಪಾಲಿಸಬೇಕಾಗುತ್ತದೆ.

    ರಥಬೀದಿಯಲ್ಲಿ ಸಾವಿರಾರು ಜನ ಸೇರಿ ಆಚರಿಸುವ ವಿಟ್ಲಪಿಂಡಿ ಆಚರಣೆಗೆ ಕೂಡ ನೂರು ಜನ ಸೇರುವ ಅವಕಾಶವೂ ಇಲ್ಲ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ವೇಷ, ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವಕಾಶ ಇಲ್ಲ. ಪೊಲೀಸ್ ನಿಯೋಜನೆ ಮಾಡಿ ಸಾರ್ವಜನಿಕ ಪಾಲ್ಗೊಳ್ಳುವಿಕೆಗೆ ಅವಕಾಶ ಕೊಡುವುದಿಲ್ಲ ಎಂದು ಡಿಸಿ ಹೇಳಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಜಿ. ಜಗದೀಶ್, ಕೃಷ್ಣ ಮಠದ ಪರ್ಯಾಯ ಅದಮಾರು ಸ್ವಾಮೀಜಿ ಜೊತೆ ಮಾತನಾಡಿದ್ದೇನೆ. ಸರ್ಕಾರದ ನಿಯಮವನ್ನು ಪಾಲಿಸುವುದಾಗಿ ಸ್ವಾಮೀಜಿ ಒಪ್ಪಿಕೊಂಡಿದ್ದಾರೆ. ಸಾಂಪ್ರದಾಯಿಕ ರೀತಿಯಲ್ಲಿ ಅಷ್ಟಮಿ ಮತ್ತು ವಿಟ್ಲಪಿಂಡಿ ಆಚರಣೆ ನಡೆಯುತ್ತದೆ. ಕೃಷ್ಣ ಮಠಕ್ಕೆ ಬರುವ ಸಾರ್ವಜನಿಕ ರಸ್ತೆಗಳನ್ನು ಬಂದ್ ಮಾಡುತ್ತೇವೆ. ಮಠದ ಸುತ್ತಲ ಎಲ್ಲಾ ರಸ್ತೆಗಳಲ್ಲಿ ಪೊಲೀಸ್ ನಿಯೋಜನೆ ಮಾಡುತ್ತೇವೆ ಎಂದರು.

    ಅಷ್ಟಮಿ ಮತ್ತು ವಿಟ್ಲಪಿಂಡಿಯಂದು ಯಾವುದೇ ವೇಷಗಳಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ಅವಕಾಶ ಇಲ್ಲ. ಮಠದ ಸಿಬ್ಬಂದಿ ಮೊಸರು ಕುಡಿಕೆಯನ್ನು ಸಾಂಪ್ರದಾಯಕವಾಗಿ ನಡೆಸುತ್ತಾರೆ. ಅದನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಇಲ್ಲ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply