Connect with us

    LATEST NEWS

    ಉಡುಪಿ ಶ್ರೀಕೃಷ್ಣ ಮಠ ನಾಮಫಲಕದಲ್ಲಿ ಕನ್ನಡ ಮಾಯ – ಭುಗಿಲೆದ್ದ ಆಕ್ರೋಶ

    ಉಡುಪಿ ಡಿಸೆಂಬರ್ 1: ಉಡುಪಿ ಶ್ರೀಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ಮಾಯವಾಗಿದ್ದು, ಈಗ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಠದ ಮಹಾದ್ವಾರದ ಫಲಕದಲ್ಲಿ ಶ್ರೀ ಕೃಷ್ಣ ಮಠ, ರಜತಪೀಠ ಪುರಂ ಎಂದು ಬರೆದಿರುವ ಫಲಕ ಇದ್ದು ಇದರಲ್ಲಿ ತುಳು ಮತ್ತು ಸಂಸ್ಕೃತದಲ್ಲಿ ಮಾತ್ರ ಬರೆಯಲಾಗಿತ್ತು. ಇದಕ್ಕೂ ಮೊದಲು ಈ ವರೆಗೆ ಕನ್ನಡ ಫಲಕವೇ ಇದ್ದು ಅದರಲ್ಲಿ ಕೃಷ್ಣಮಠ ಎಂದು ಕನ್ನಡ ಹಾಗೂ ಇಂಗ್ಲೀಷ್ ನಲ್ಲಿ ಬರೆಯಲಾಗಿತ್ತು. ಈಗ ಪರ್ಯಾಯ ಅದಮಾರು ಮಠ ಫಲಕವನ್ನು ಬದಲಾವಣೆ ಮಾಡಿ ಹೊಸ ಫಲಕದಲ್ಲಿ ತುಳು ಹಾಗೂ ಸಂಸ್ಕೃತ ಬರೆಯಲಾಗಿದೆ.


    ಈಗಾಗಲೇ ಈ ವಿಚಾರ ವಿವಾದಕ್ಕೆ ತಿರುಗಿದ್ದು ಕರ್ನಾಟಕದಲ್ಲಿ ಕನ್ನಡ ಫಲಕ ಕಡ್ಡಾಯ ಎಂಬ ರಾಜ್ಯ ಸರಕಾರದ ಆದೇಶವಿದ್ದರೂ ಅದಮಾರು ಮಠ ಈ ರೀತಿಯ ಕ್ರಮಕೈಗೊಂಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ ನ ಉಡುಪಿ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ನನ್ನು ತೆಗೆದು ಹಾಕಿದ್ದು ಸರಿಯಾದ ಕ್ರಮವಲ್ಲ.ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ.ಕನ್ನಡ ನಾಡಿನಲ್ಲಿ ಮೊದಲು ಕನ್ನಡ ಕ್ಕೆ ಆಧ್ಯತೆ. ನಾಮಫಲಕ ದಲ್ಲಿ ಮೊದಲು ಕನ್ನಡ ಇರಬೇಕು.ಆನಂತರ ಇತರ ಭಾಷೆ. ಒಂದು ಧಾರ್ಮಿಕ ಸಂಸ್ಥೆ ಭಾಷೆಗಳ ನಡುವೆ ಕಂದಕ ಸೃಷ್ಟಿಸುವುದು ಸರಿಯಲ್ಲ.


    ನಾಮ ಫಲಕದ ಈ ಪ್ರಕರಣ ಸರ್ಕಾರದ ಕಾನೂನಿನ ಸ್ವಷ್ಟ ಉಲ್ಲಂಘನೆಯಾಗಿದೆ.ಇದನ್ನು ಕೂಡಲೇ ಸರಿಪಡಿಸಬೇಕು. ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಮುಂದೆ ಇದನ್ನು ಸರಿಪಡಿಸುವ ವರೆಗೂ ಹೋರಾಟ ಅನಿವಾರ್ಯ. ಸಮಾಜಕ್ಕೆ ಮಾರ್ಗದರ್ಶನ ಮಾಡುವವರೆ ಇಂತಹ ಕುಚೋದ್ಯ ಕೆಲಸಕ್ಕೆ ಕೈ ಹಾಕಿರುವುದು ಕ್ಷಮಿಸಲಾಗದ ಅಪರಾಧ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ. ಸಂಬಂಧಪಟ್ಟ ವರು ತಕ್ಷಣ ಇದನ್ನು ಸರಿಪಡಿಸಬೇಕು.ಇದು ಕನ್ನಡ ಸಾಹಿತ್ಯ ಪರಿಷತ್ ನ ಹಕ್ಕೊತ್ತಾಯದ ವಾಗಿದೆ.ನಾಮಫಲಕ ದಲ್ಲಿ ಕನ್ನಡ ಭಾಷೆ ತೆಗೆದು ತುಳು ಭಾಷೆ ಹಾಕಿದ್ದು ಸರಿಯಲ್ಲ. ಬೇರೆ ಭಾಷೆಯನ್ನು ಬೆಳೆಸುವಾಗ ಮೊದಲು ಕನ್ನಡ ವನ್ನೇ ಬಳಸಬೇಕು.

    ಕನ್ನಡ ಭಾಷೆ ಯನ್ನು ಕೈ ಬಿಟ್ಟು ಬೇರೆ ಭಾಷೆಯನ್ನು ಬಳಸಿದ್ದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ.ಮೊದಲು ಕನ್ನಡ  ಆನಂತರ ಇತರೆ ಭಾಷೆ ನಾಮಫಲಕದಲ್ಲಿಇರಲಿ.ಕನ್ನಡ ಮತ್ತು ಸೋದರ ಭಾಷೆ ತುಳುವಿನ ನಡುವೆ ಕಂದಕ ನಿರ್ಮಾಣ ಮಾಡುವುದು ಸಹ ಪರಿಷತ್ ತೀವ್ರ ವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.


    ತುಳು ಇಲ್ಲಿನ ಆಡು ಭಾಷೆ ಎಂಬುದು ನಿಜ.ಆದರೆ ನಾಮಫಲಕದಲ್ಲಿ ಕನ್ನಡ ಕಡ್ಡಾಯ ಎಂಬುದನ್ನು ಸರಕಾರವೇ ಸ್ಪಷ್ಟಪಡಿಸಿದೆ.ಕನ್ನಡದಲ್ಲಿ ಬರೆದ ಬಳಿಕ ತುಳು ,ಸಂಸ್ಕೃತ ದಲ್ಲಿ ಬರೆಯಲಿ.ಆದರೆ ಕನ್ನಡವನ್ನೇ ಮಾಯ ಮಾಡುವುದು ಅಪರಾಧ.ಪರ್ಯಾಯ ಅದಮಾರು ಮಠಕ್ಕೆ ಯಾರು ಈ ಐಡಿಯಾ ಕೊಟ್ಟಿದ್ದಾರೋ ಗೊತ್ತಿಲ್ಲ.ಮಠಮಾನ್ಯಗಳು ಸಮಾಜಕ್ಕೆ ಮಾರ್ಗದರ್ಶನ ನೀಡಬೇಕೇ ಹೊರತು ಇಂತಹ ಬೆಳವಣಿಗೆಗಳಿಗೆ ಅವಕಾಶ ನೀಡಬಾರದು ಎಂದು ಕೃಷ್ಣಭಕ್ತ ,ಸಾಮಾಜಿಕ ಮುಂದಾಳು ವಾಸುದೇವ ಭಟ್ ಹೇಳಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *