LATEST NEWS
ಕುಂದಾಪುರದಲ್ಲಿ ಬೋನಿಗೆ ಬಿದ್ದ ಚಿರತೆ
ಕುಂದಾಪುರದಲ್ಲಿ ಬೋನಿಗೆ ಬಿದ್ದ ಚಿರತೆ
ಉಡುಪಿ ನವೆಂಬರ್ 29: ಕಳೆದ ಕೆಲವು ತಿಂಗಳಿನಿಂದ ಕುಂದಾಪುರದ ಗುಡ್ಡಟ್ಟು ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಠಿಸಿದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಕುಂದಾಪುರ ತಾಲೂಕಿನ ಶಂಕರನಾರಾಯಣ ಅರಣ್ಯ ಇಲಾಖೆ ವ್ಯಾಪ್ತಿಯ ಯಡ್ಯಾಡಿ ಮತ್ಯಾಡಿ ಗ್ರಾಮದಲ್ಲಿ ದಿನೇ ದಿನೇ ಚಿರತೆ ಉಪಟಳ ಹೆಚ್ಚಿದ್ದು, ಸಾಕು ಪ್ರಾಣಿಗಳು ಬಲಿಯಾಗುತ್ತಿದ್ದವು. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಯವರು ಕಳೆದ ತಿಂಗಳು ಚಂದ್ರಾವತಿ ಗುಡ್ಡೆಮನೆ ಎಂಬವರ ಜಾಗದಲ್ಲಿ ಬೋನು ಇಟ್ಟಿದ್ದರು. ಆದರೆ ಉಪಟಳ ನೀಡುತ್ತಿದ್ದ ಚಿರತೆ ಬೋನು ಇಲ್ಲದಲ್ಲೆಲ್ಲಾ ಓಡಾಡುತ್ತಿತ್ತು. ಕೊನೆಗೂ ಬೋನಿಗೆ ಬಿದ್ದಿದೆ.
ಸೆರೆಸಿಕ್ಕ ಚಿರತೆಯನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಿಸಿ ಕೊಲ್ಲೂರು ಅಭಯಾರಣ್ಯಕ್ಕೆ ರವಾನಿಸಿದ್ದಾರೆ. ಸುಮಾರು 5 ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು, ಅರಣ್ಯಾಧಿಕಾರಿ ಚಿರತೆಯನ್ನು ಪರಿಶೀಲಿಸಿ ಅಭಯಾರಣ್ಯ ಬಿಟ್ಟಿದ್ದಾರೆ.