LATEST NEWS
ಉಡುಪಿ ಕ್ರಿಶ್ಚಿಯನ್ ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ – ಸ್ವಇಚ್ಛೆಯಿಂದ ಮೊಹಮ್ಮದ್ ಅಕ್ರಮ್ ಜೊತೆ ಹೋಗಿರುವುದಾಗಿ ಒಪ್ಪಿಕೊಂಡ ಯುವತಿ

ಉಡುಪಿ ಎಪ್ರಿಲ್ 05: ಮುಸ್ಲಿಂ ಯುವಕನೊಬ್ಬ ತಮ್ಮ ಮಗಳನ್ನು ಅಪಹರಿಸಿದ್ದು, ಅವಳನ್ನು ಮದುವೆಯಾಗಲು ಹೊರಟಿದ್ದಾನೆ ಇದು ಲವ್ ಜಿಹಾದ್ ನ ಷಡ್ಯಂತ್ರ ಎಂದು ಯುವತಿಯ ಪೋಷಕರು ಆರೋಪಿಸಿದ್ದ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಯುವತಿ ನ್ಯಾಯಾಲಯದಲ್ಲಿ ಸ್ವಇಚ್ಛೆಯಿಂದ ಮೊಹಮ್ಮದ್ ಅಕ್ರಮ್ ಜೊತೆ ಹೋಗಿರುವುದಾಗಿ ಒಪ್ಪಿಕೊಂಡಿದ್ದಾಳೆ.
ಜೀನಾ ಮೆರಿಲ್ ಎಂಬ ಯುವತಿಯನ್ನು ಅಕ್ರಮ್ ಎಂಬಾತ ಅಪಹರಿಸಿದ್ದಾನೆ ಎಂದು ಪೋಷಕರು ದೂರು ನೀಡಿದ್ದರು. ಯುವತಿಯನ್ನ ಶೀಘ್ರ ಪತ್ತೆ ಹಚ್ಚುವಂತೆ ಆಗ್ರಹಿಸಿ ಪೋಷಕರಿಂದ ಹೈ ಕೋರ್ಟ್ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆಗಾಗಿ ಯುವತಿ ಜೀನಾ ಮೆರಿಲ್ ಮತ್ತು ಅಕ್ರಮ್ ತಮ್ಮ ಲಾಯರ್ ಜೊತೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ತನ್ನನ್ನು ಯಾರೂ ಕೂಡ ಅಪಹರಿಸಿರುವುದಿಲ್ಲ. ನಾನು ಸ್ವಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ಹೇಳಿದ್ದಾಳೆ. ಈ ವೇಳೆ ಹುಡುಗಿ ಜೊತೆ ಮಾತನಾಡಲು ತಾಯಿ ಅನುಮತಿ ಕೇಳಿದಾಗ ನ್ಯಾಯಾಧೀಶರು ಕೊಠಡಿಯಲ್ಲೇ ಅವಕಾಶ ನೀಡಿದ್ದು, ಬಳಿಕ ವಿಚಾರಣೆಯಲ್ಲಿ ಮಗಳನ್ನು ತನ್ನ ಜೊತೆ ಕಳಿಸುವಂತೆ ನ್ಯಾಯಾಧೀಶರಲ್ಲಿ ತಾಯಿ ಮನವಿ ಮಾಡಿದರು. ಆದರೆ ಇದಕ್ಕೆ ಯುವತಿ ಒಪ್ಪಿಲ್ಲ.
ತಾನು ಅಕ್ರಮ್ ಜೊತೆ ಏಪ್ರಿಲ್ 19 ರಂದು ರಿಜಿಸ್ಟರ್ ಮದುವೆ ಮಾಡಿಕೊಳ್ಳುತ್ತೇನೆ. ಮದುವೆ ನಂತರ ತಾಯಿಯನ್ನು ಭೇಟಿಯಾಗುವುದಾಗಿ ಯುವತಿ ಭರವಸೆ ನೀಡಿದ್ದು, ತಾಯಿ ಜೊತೆಗೆ ಉತ್ತಮ ಬಾಂಧವ್ಯದೊಂದಿಗೆ ಇರುತ್ತೇನೆ ಎಂದಿದ್ದಾಳೆ. ಸದ್ಯ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಏಪ್ರಿಲ್ 22 ರಂದು ನಿಗದಿಪಡಿಸಿದೆ.
3 Comments