LATEST NEWS
ಉಡುಪಿ : ಪಡುಬಿದ್ರಿಯಲ್ಲಿ ಟ್ಯಾಂಕರ್ – ಸ್ಕೂಟರ್ ನಡುವೆ ಅಪಘಾತ : ಸಹ ಸವಾರ ಮೃತ್ಯು…!!

ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಹೆಜಮಾಡಿ ಕನ್ನಂಗಾರಿನಲ್ಲಿ ಸ್ಕೂಟರ್ ಮತ್ತು ಟ್ಯಾಂಕರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್‌ನಲ್ಲಿದ್ದ ಸಹ ಸವಾರ ಮೃತಪಟ್ಟಿದ್ದಾರೆ.
ಉಡುಪಿ : ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಹೆಜಮಾಡಿ ಕನ್ನಂಗಾರಿನಲ್ಲಿ ಸ್ಕೂಟರ್ ಮತ್ತು ಟ್ಯಾಂಕರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್‌ನಲ್ಲಿದ್ದ ಸಹ ಸವಾರ ಮೃತಪಟ್ಟಿದ್ದಾರೆ.

ಮೃತ ಯುವಕ ಬೈಕ್ ಸಹ ಸವಾರ ಜಾರ್ಖಂಡ್ ಮೂಲದ ಹೆಜಮಾಡಿ ಬ್ರಹ್ಮಸ್ಥಾನ ಬಳಿ ಬಾಡಿಗೆ ಮನೆಯೊಂದರ ನಿವಾಸಿ ಸದ್ದಾಂ ಅನ್ಸಾರಿ (20) ಎಂದು ಗುರುತಿಸಲಾಗಿದೆ.
ಈತ ಮೇಸ್ತ್ರಿ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ.
ಸ್ಕೂಟರ್ ಸವಾರ ಪರ್ವೇಜ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮನೆಯಿಂದ ಪಡುಬಿದ್ರಿ ಕಡೆಗೆ ಸ್ಕೂಟರ್ ನಲ್ಲಿ ಬರುತ್ತಿದ್ದು, ಹೆಜಮಾಡಿ ಒಳ ರಸ್ತೆಯಿಂದ ಹೆದ್ದಾರಿಗೆ ಎಂಟ್ರಿ ಕೊಡುತ್ತಿದ್ದಂತೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಗೆ ಸ್ಕೂಟರ್ ಡಿಕ್ಕಿಯಾಗಿದೆ ಎನ್ನಲಾಗಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅನ್ಸಾರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.