Connect with us

    LATEST NEWS

    ಮಳೆಗಾಲ ಸಂದರ್ಭದಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

    ಮಳೆಗಾಲ ಸಂದರ್ಭದಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

    ಉಡುಪಿ, ಮೇ 23: ಜಿಲ್ಲೆಯಲ್ಲಿ ಮಾನ್ಸೂನ್ ಅವಧಿಯಲ್ಲಿ ಎದುರಾಗುವ ಪ್ರಾಕೃತಿಕ ವಿಕೋಪಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲು ಎಲ್ಲಾ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಹಾಗೂ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ,ಮುಂಗಾರು ಮಳೆ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸುವ ಕುರಿತು ಅಗತ್ಯವಾದ ಎಲ್ಲಾ ಮುಂಜಾಗೃತಾ ಹಾಗೂ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಮಳೆಗಾಲದ ಸಂದರ್ಭದಲ್ಲಿ ಸಂಭವಿಸುವ ಅನಾಹುತಗಳಿಗೆ ತಕ್ಷಣದಲ್ಲಿ ಸ್ಪಂದಿಸಲು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಎಲ್ಲಾ 7 ತಾಲೂಕುಗಳಲ್ಲಿ 24 ಗಂಟೆಯ ತುರ್ತು ಕಂಟ್ರೋಲ್ ರೂಂ ಗಳನ್ನು ತೆಗೆದು, ಸದಾ ಕಾಲ ಈ ಕಂಟ್ರೋಲ್ ರೂಂ ನಲ್ಲಿ ಮುಳುಗು ತಜ್ಞರು ಸೇರಿದಂತೆ ಎಲ್ಲಾ ಅಗತ್ಯ ಸಿಬ್ಬಂದಿ ಸದಾ ಸನ್ನದ್ದರಿರುವಂತೆ ತಿಳಿಸಿದ ಜಿಲ್ಲಾಧಿಕಾರಿ, ನೆರೆ ಬರುವ ಪ್ರದೇಶಗಳಲ್ಲಿ ಅಗತ್ಯ ದೋಣಿಯ ವ್ಯವಸ್ಥೆಯನ್ನು ಸಿದ್ದವಾಗಿಟ್ಟುಕೊಳ್ಳುವಂತೆ ಹಾಗೂ ಎಲ್ಲಾ ಅಧಿಕಾರಿಗಳು ತಮ್ಮ ಮೊಬೈಲ್ ನ್ನು ಯಾವುದೇ ಕಾರಣಕ್ಕೂ ಸ್ವಚ್ ಆಫ್ ಮಾಡದಂತೆ ಹಾಗೂ ಕೇಂದ್ರಸ್ಥಾನವನ್ನು ಬಿಟ್ಟು ತೆರಳದಂತೆ ಸೂಚಿಸಿದ ಜಿಲ್ಲಾಧಿಕಾರಿ, ಸಂತ್ರಸ್ಥರ ನೆರವಿಗೆ ತಕ್ಷಣವೇ ಸ್ಪಂದಿಸುವಂತೆ ಸೂಚಿಸಿದರು.

    ಮಳೆಯಿಂದ ಜೀವ ಹಾನಿ , ಆಸ್ತಿ ಹಾನಿ ಹಾಗೂ ಜಾನುವಾರು ಹಾನಿಯ ಪರಿಹಾರದ ನೀಡುವ ಕುರಿತಂತೆ ಶೀಘ್ರದಲ್ಲಿ ವರದಿ ತಯಾರಿಸಿ, ಪರಿಹಾರದ ಹಣವನ್ನು ಬಿಡುಗಡೆ ಮಾಡುವಂತೆ ಎಲ್ಲಾ ತಹಸೀಲ್ದಾರ್ ಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ನೀರು ನಿಲ್ಲದಂತೆ ಹಾಗೂ ರಸ್ತೆಯ ಬದಿಯಲ್ಲಿ ಮಣ್ಣು ಕಉಸಿತ ಸಂಭವಿಸದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

    ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತೆರೆದ ಗುಂಡಿ ಹಾಗೂ ಲೈಸೆನ್ಸ್ ಮುಗಿದ ಕಲ್ಲು ಕೋರೆಗಳಿಗೆ ಸೂಕ್ತ ಬೇಲಿ ಅಳವಡಿಸಿ, ಎಚ್ಚರಿಕೆ ಫಲಕಗಳನ್ನು ಅಳವಡಿಸುಸಂತೆ ಎಲ್ಲಾ ಪಂಚಾಯತ್ ಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಕಲ್ಲು ಕೋರೆಗಳ ಮಾಲೀಕರಿಗೆ ಸೂಕ್ತ ಬೇಲಿ ಹಾಗೂ ಎಚ್ಚರಿಕೆ ಫಲಕ ಅಳವಡಿಸುವ ಕುರಿತಂತೆ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲೆಯ ಎಲ್ಲಾ ಸರಕಾರಿ ಶಾಲೆಗಳನ್ನು ಸೂಕ್ತ ರೀತಿಯಲ್ಲಿ ದುರಸ್ತಿ ಮಾಡಿಸುವಂತೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಶಾಲಾ ಮಕ್ಕಳು ಶಾಲೆಗೆ ಬರುವ ಹಾದಿಯಲ್ಲಿ ಯಾವುದೇ ಅಪಾಯಕಾರಿ ಗುಂಡಿಗಳಿರುವ ಕುರಿತು ಮಕ್ಕಳಿಂದ ಮಾಹಿತಿ ಪಡೆದು ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ, ಶಾಲಾ ವಾಹನಗಳ ಚಾಲಕರಿಗೆ ಸುರಕ್ಷಿತವಾಗಿ ಮಕ್ಕಳನ್ನು ಶಾಲೆಗೆ ತಲುಪಿಸುವಂತೆ ಸೂಚನೆ ನೀಡುವಂತೆ, ನಿಗಧಿತ ಸಮಯದಲ್ಲಿ ಶಾಲೆಗೆ ತಲುಪಲು ಸಾದ್ಯವಾಗದ ಸಂದರ್ಭದಲ್ಲಿ ಮಕ್ಕಳ ಮೇಲೆ ಹಾಗೂ ಪಾಲಕರ ಮೇಲೆ ಒತ್ತಡ ಹೇರದಂತೆ ಶಾಲಾ ಆಡಳಿತ ಮಂಡಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಹೆಚ್ಚಿನ ಮಳೆ ಇದ್ದ ಸಂದರ್ಭದಲ್ಲಿ , ಜಿಲ್ಲಾಡಳಿತದ ಅನುಮತಿ ಪಡೆದು ಶಾಲೆಗಳಿಗೆ ರಜೆ ನೀಡುವಂತೆ ಮತ್ತು ಶಾಲೆ ಪ್ರಾರಂಭವಾಗುವ ಮುಂಚೆ ಜಿಲ್ಲೆಯ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಶಾಲೆಗಳು, ಶಾಲಾ ಮಕ್ಕಳ ಸುರಕ್ಷತಾ ಸಭೆಯನ್ನು ನಡೆಸಿ ವರದಿ ನೀಡುವಂತೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

    ಮೆಸ್ಕಾಂ ಇಲಾಖೆಯಿಂದ ಉತ್ತಮ ಸೇವೆ ಒದಗಿಸುವಂತೆ ಹಾಗೂ ಅಗ್ನಿಶಾಮಕ ಇಲಾಖೆಯಿಂದ ತುರ್ತು ಸಂದರ್ಭದಲ್ಲಿ ಅಗತ್ಯವಿರುವ ಎಲ್ಲಾ ಉಪಕರಣಗಳೊಂದಿಗೆ ಸಿದ್ದರಿರುವಂತೆ , ಕಿಂಡಿ ಅಣೆಕಟ್ಟುಗಳಿಗೆ ಅಳವಡಿಸಿರುವ ಹಲಗೆ ತೆಗೆದು ಅವುಗಳನ್ನು ಸೂಕ್ತ ರೀತಿಯಲ್ಲಿ ಮರು ಬಳಕೆಗೆ ಶೇಖರಿಸುವಂತೆ ಹಾಗೂ ಸಮುದ್ರ ಕೊರೆತ ತಡೆ ಕುರಿತಂತೆ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

    ಎಲ್ಲಾ ತಾಲೂಕುಗಳಲ್ಲಿ ರಚಿಸಲಾಗುವ ಕಂಟ್ರೋಲ್ ರೂಂ ಗಳಿಗೆ ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಹಾಗೂ ತುರ್ತು ಸಂದರ್ಭದಲ್ಲಿ ಕಾರ್ಯ ನಿರ್ವಹಿಸಉವ ತಂಡಕ್ಕೆ ಪ್ರಥಮ ಚಿಕಿತ್ಸಾ ಕಿಟ್, ರಾತ್ರಿ ವೇಳೆ ಕಾರ್ಯ ನಿರ್ವಹಿಸಲು ಬ್ಯಾಟರಿ ಸೇರಿದಂತೆ ಎಲ್ಲಾ ಅಗತ್ಯ ಉಪಕರಣಗಳನ್ನು ಒದಗಿಸುವಂತೆ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

    ಯಾವುದೇ ಸಾಂಕ್ರಾಮಿಕ ರೋಗ ಹರಡದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಅಗತ್ಯ ಔಷಧಗಳ ದಾಸ್ತಾನು ಲಭ್ಯವಿರುವಂತೆ ನೋಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply