Connect with us

    LATEST NEWS

    ಕಡಲ ಅಬ್ಬರದ ನಡುವೆ ಮರವಂತೆ ಬೀಚ್ ನಲ್ಲಿ ಪ್ರವಾಸಿಗರ ಹುಚ್ಚಾಟ..!!

    ಉಡುಪಿ ಜುಲೈ 06: ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಉಡುಪಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದ್ದು,ಹಲವಾರು ಪ್ರದೇಶಗಳು ಜಲಾವೃತವಾಗಿದೆ. ಅಲ್ಲದೆ ಸಮುದ್ರ ಕೂಡ ಪ್ರಕ್ಷುಬ್ದಗೊಂಡಿದ್ದು, ಸಮುದ್ರಕ್ಕೆ ಯಾರೂ ಇಳಿಯಬಾರದೆಂದು ಜಿಲ್ಲಾಡಳಿತ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಆದರೂ ಪ್ರವಾಸಿಗರು ಮರವಂತೆಯ ಸಮುದ್ರ ತೀರದಲ್ಲಿ ಹುಚ್ಚಾಟ ಮಾಡುತ್ತಿದ್ದಾರೆ.


    ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳ ಹಿಂದೆ ನಿರಂತರವಾಗಿ ಸುರಿದ ಮಳೆ ಹಿನ್ನೆಲೆ ಸಾಕಷ್ಟು ಭಾಗದಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ . ಆದ್ರೆ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್​ನಲ್ಲಿ ಪ್ರವಾಸಿಗರ ಹುಚ್ಚಾಟ ಹೆಚ್ಚಾಗಿದೆ. ಪ್ರತಿ ದಿನ ಪ್ರವಾಸಿಗರು ಮರವಂತೆ ಬೀಚ್​ಗೆ ಆಗಮಿಸಿ ಸಮುದ್ರದ ಅಲೆಗಳ ನರ್ತನವನ್ನು ಎಂಜಾಯ್ ಮಾಡಿದ್ದಾರೆ. ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿಯುತ್ತಿದ್ದಾರೆ. ಹೀಗಾಗಿ ಅನಾಹುತಕ್ಕೆ ಆಹ್ವಾನ ಕೊಟ್ಟಂತಾಗಿದೆ.


    ಮಳೆಗಾಲ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬೀಚ್​ಗಳಿಗೂ ಪ್ರವೇಶ ನಿಷೇಧ ಹೇರಲಾಗಿದೆ. ಮಳೆಗಾಲದಲ್ಲಿ ಕಡಲಬ್ಬರ ಜಾಸ್ತಿ ಆಗುವ ಹಿನ್ನಲೆ ಬೀಚ್​ಗಳ ಬಳಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಮಳೆಗಾಲದಲ್ಲಿ‌ಸಮುದ್ರಕ್ಕೆ ಇಳಿಯುದಕ್ಕೆ ನಿಷೇಧ ಮಾಡಲಾಗಿದೆ. ಪೊಲೀಸ್ ರಿಬ್ಬನ್ ಕಟ್ಟಿದ್ರು ಕೂಡ ಪ್ರವಾಸಿಗರ ಅಟ್ಟಹಾಸ..ಈಗಾಗಲೇ ಜಿಲ್ಲೆಯ ಮಲ್ಪೆ ಬೀಚ್​ಗೆ ಬಲೆ ಅಳವಡಿಕೆ ಮಾಡಲಾಗಿದೆ. ಆದರೆ ಮರವಂತೆ ಬೀಚ್​ಗೆ ಯಾವುದೇ ಭದ್ರತೆ ಕೈಗೊಂಡಿಲ್ಲ. ಹೀಗಾಗಿ ಮೂರು ಕಿಲೋಮೀಟರ್ ಉದ್ದದ ಬೀಚ್​ಗೆ ಪ್ರವಾಸಿಗರು ನಿತ್ಯ ಆಗಮಿಸುತ್ತಿದ್ದಾರೆ.

    ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ನೀಡದೆ ಸಮುದ್ರಕ್ಕೆ ಇಳಿದು ಹುಚ್ಚಾಟ ಪ್ರದರ್ಶಿಸುತ್ತಿದ್ದಾರೆ. ಮಳೆಗಾಲದಲ್ಲಿ ಅಪಾಯಕ್ಕೆ ಆಹ್ವಾನ ನೀಡುವಂತೆ ಬೀಚ್​ಗೆ ಇಳಿಯುತ್ತಿದ್ದಾರೆ. ದಿನವೂ ಸಾವಿರಾರು ಪ್ರವಾಸಿಗರು ಮರವಂತೆ ಬೀಚ್​ಗೆ ಭೇಟಿ ನೀಡುತ್ತಿದ್ದು ಬೀಚ್​ಗೆ ಫೆನ್ಸಿಂಗ್ ಅಳವಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಪ್ರತಿ ವರ್ಷವೂ ಕೂಡ ಒಂದಲ್ಲ ಒಂದು ಅವಘಡಗಳು ಇಲ್ಲಿ ನಡೆಯುತ್ತವೆ. ಹೀಗಾಗಿ ಮಲ್ಪೆ ಬೀಚಿನಷ್ಟೇ ಪ್ರಾಮುಖ್ಯತೆಯನ್ನು ಮರವಂತೆ ಬೀಚ್ ಗೆ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *