LATEST NEWS
ಉಡುಪಿ ಎಂಜಿಎಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಮ್ ಮುಂದೂಡಿಕೆ

ಉಡುಪಿ – ಉಡುಪಿಯ ಎಂ ಜಿ ಎಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಮ್ ಮುಂದೂಡಿಕೆ ಮಾಡಲಾಗಿದೆ. ಫೆಬ್ರವರಿ 7ರಂದು ಎಂಜಿಎಂ ಕಾಲೇಜಿನಲ್ಲಿ ಕೇಸರಿ ಹಿಜಬ್ ಫೈಟ್ ನಡೆದಿತ್ತು. ಇಂದು ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆ ಆರಂಭವಾಗಬೇಕಿತ್ತು. ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂಬ ಉದ್ದೇಶದಿಂದ ಪರೀಕ್ಷೆ ರದ್ದು ಮಾಡಲಾಗಿದೆ.
ಗುರುವಾರ ಕೆಮಿಸ್ಟ್ರಿ ಪ್ರಾಕ್ಟಿಕಲ್ ಪರೀಕ್ಷೆ ನಡೆಯಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಈ ತರಗತಿಯಲ್ಲಿದ್ದಾರೆ. ಮತ್ತೆ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂದು ತಾತ್ಕಾಲಿಕವಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರವೇ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಎಂಜಿಎಂ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
