Connect with us

    LATEST NEWS

    ಉಡುಪಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ನಕಲಿ ಖಾತೆ ತೆರೆದ ದುಷ್ಕರ್ಮಿಗಳು , FIR ದಾಖಲು

    ಉಡುಪಿ: ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ  ವಿದ್ಯಮಾನ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳ ವಿರುದ್ದ ಕ್ರಮಕ್ಕೆ  ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಅವರ ಫೋಟೋವನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಜಾಲತಾಣ ಇಸ್ಟಗ್ರಾಮ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಈ ಮೂಲಕ ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ದುರುದ್ದೇಶಪೂರ್ವಕವಾಗಿ ಅಕ್ರಮ ಹಣವನ್ನು ಸಂಪಾದಿಸುವ ಹಾಗೂ ಹೆಸರನ್ನು ಕೆಡಿಸುವ ಉದ್ದೇಶದಿಂದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಸದರ ವಕೀಲ ಶ್ಯಾಮಸುಂದರ ನಾಯರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *