LATEST NEWS
ಉಡುಪಿ – ಸ್ನೇಹಿತನ ಕೊ*ಲೆ ಮಾಡಿ ಪೊಲೀಸರಿಗೆ ಪೋನ್ ಮಾಡಿದ ಆರೋಪಿ
ಉಡುಪಿ ಅಕ್ಟೋಬರ್ 22: ಸ್ನೇಹಿತನ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿಯನ್ನು ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂದು ಗುರುತಿಸಲಾಗಿದೆ. ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಇಂದು ಬೆಳಗ್ಗೆ ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕೃತ್ಯ ಎಸಗಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಮೇಲ್ನೋಟಕ್ಕೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ನಡೆದಿದಂತೆ ಕಂಡುಬಂದರೂ ಬೇರೆ ಏನಾದರೂ ಕಾರಣ ಇದೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
You must be logged in to post a comment Login