LATEST NEWS
ಉಡುಪಿ ಹತ್ಯಾಕಾಂಡ- ಆರೋಪಿ ವಶಕ್ಕೆ ಪಡೆದಿದ್ದು, ಸಂಜೆಯೊಳಗೆ ಮಾಹಿತಿ ಸಿಗಲಿದೆ – ಉಡುಪಿ ಎಸ್ಪಿ

ಉಡುಪಿ ನವೆಂಬರ್ 15: ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿದ ಉಡುಪಿ ನೇಜಾರಿನಲ್ಲಿ ನಡೆದ ಮುಸ್ಲಿಂ ಕುಟುಂಬದ ಹತ್ಯಾಕಾಂಡ ನಡೆಸಿದ ಶಂಕಿತ ಆರೋಪಿಯನ್ನು ಉಡುಪಿ ಪೊಲೀಸರು ಅರೆಸ್ಟ್ ಮಾಡಿದ್ದು, ಇಂದು ಸಂಜೆಯ ಒಳಗೆ ಸಂಪೂರ್ಣ ಮಾಹಿತಿ ದೊರೆಯಲಿದೆ ಎಂದು ಉಡುಪಿ ಜಿಲ್ಲಾ ಎಸ್ ಪಿ ಡಾ. ಅರುಣ್ ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಮಾತನಾಡಿದ ಅವರು ನಾಲ್ವರ ಹತ್ಯೆಗೆ ಸಂಬಂಧಿಸಿ ಪ್ರವೀಣ್ ಅರುಣ್ ಚೌಗಲೆ ಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ, ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದೇವೆ ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ಚೌಗಲೆ ಯನ್ನು ವಶಕ್ಕೆ ಪಡೆಯಲಾಗಿದ್ದು ಇದರೊಂದಿಗೆ ಹಲವಾರು ಶಂಕಿತರ ವಿಚಾರಣೆಯನ್ನೂ ಮಾಡುತ್ತಿದ್ದೇವೆ ಎಂದು ಹೇಳಿದರು. ಘಟನೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದರು.
ಈ ಪ್ರಕರಣದಲ್ಲಿ ನಾವು 15-20 ಮಂದಿ ಶಂಕಿತರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದೆವು. ಅದೇ ರೀತಿ ಪ್ರವೀಣನನ್ನು ಕೂಡ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಸ್ಪಿ ಮಾಹಿತಿ ನೀಡಿದರು. ಹೆಚ್ಚಿನ ಮಾಹಿತಿಯನ್ನು ಸಂಜೆಯ ವೇಳೆ ನೀಡಲಾಗುವುದು ಎಂದು ಎಸ್ಪಿ ಹೇಳಿದ್ದಾರೆ.