Connect with us

    LATEST NEWS

    ಭಾರಿ ಮಳೆ ಸಾಧ್ಯತೆ – 5 ದಿನ ಉಡುಪಿಯಲ್ಲಿ ಆರಂಜ್ ಅಲರ್ಟ್ ಘೋಷಣೆ

    ಉಡುಪಿ ಅಗಸ್ಟ್ 1: ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.


    ಉಡುಪಿ ಜಿಲ್ಲೆಯಲ್ಲಿ 115 ಮಿ.ಮೀ ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ, ಹೀಗಾಗಿ ಜಿಲ್ಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಜೊತೆಗೆ ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.3 ಮೀಟರ್ ಗಳಷ್ಟು ಎತ್ತರದ ಅಲೆಗಳೂ ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply