Connect with us

LATEST NEWS

ಉಡುಪಿ – ಸ್ಕೂಟರ್ ಗೆ ಡಿಕ್ಕಿ ಹೊಡೆದ ನವಿಲು – ಸವಾರ ಸಾವು

ಉಡುಪಿ ಜುಲೈ 19: ನವಿಲೊಂದು ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.


ಮೃತ ಯುವಕನನ್ನು ಬೆಳಪು ನಿವಾಸಿ ಅಬ್ದುಲ್ಲಾ (25) ಎಂದು ಗುರುತಿಸಲಾಗಿದೆ. ಪಡುಬಿದ್ರಿ ಕಡೆಯಿಂದ ತನ್ನ ದ್ವಿಚಕ್ರವಾಹನದಲ್ಲಿ ಬರುತ್ತಿದ್ದ ಯುವಕನಿಗೆ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ. ನವಿಲು ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ದ್ವಿಚಕ್ರ ವಾಹನ ಸವಾರ ರಸ್ತೆಯಂಚಿನ  ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.


ಅಪಘಾತದ ತೀವ್ರತೆಗೆ ನವಿಲು ಸ್ಥಳದಲ್ಲೇ ಮೃತಪಟ್ಟರೆ, ಗಂಬೀರವಾಗಿ ಗಾಯಗೊಂಡಿದ್ದ ಅಬ್ದುಲ್ಲಾ ಅವರನ್ನು ಆಸ್ಪತ್ರೆಗೆ ತೆಗೆದುಕೊಂಡುವಾಗ ದಾರಿ ಮಧ್ಯೆ ಸಾವನಪ್ಪಿದ್ದಾರೆ. ಪಡುಬಿದ್ರೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.