LATEST NEWS
ಉಡುಪಿ : ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು..!

ಉಡುಪಿ : ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕೋಟ ಸಮೀಪ ಬ್ರಹ್ಮಾವರ ತಾಲೂಕಿನ ಮಣೂರು ಪಡುಕರೆಯ ಜಟ್ಟಿಗೇಶ್ವರ ಸಮೀಪ ನಡೆದಿದೆ.

ಗಂಭೀರ ಗಾಯಗೊಂಡು ಮೃತಪಟ್ಟ ದುರ್ದೈವಿ ಸ್ಥಳೀಯ ನಾರಾಯಣ (78) ಎಂದು ಗುರುತ್ತಿಸಲಾಗಿದೆ. ತೆಕ್ಕಟ್ಟೆ ಕೊಮೆಯಿಂದ ಪಡುಕರೆ ಕಡೆಗೆ ಅತೀ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದ ದ್ವಿಚಕ್ರ ವಾಹನವು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನಾರಾಯಣ ಅವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ನಾರಾಯಣರವರು ರಸ್ತೆಗೆ ಬಿದ್ದ ಪರಿಣಾಮ ಅವರ ತಲೆ ಹಾಗೂ ಎರಡೂ ಕಾಲಿಗೆ ಗಂಭೀರ ಗಾಯವಾಗಿರುತ್ತದೆ. ತಕ್ಷಣ ಸ್ಥಳೀಯರು ಗಾಯಾಳು ನಾರಾಯಣ ರವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಕಳಿಸಿದ್ದರು, ಆದರೆ ಅಲ್ಲಿ ಚಿಕಿತ್ಸೆ ಫಲಿಸದೆ ನಾರಾಯಣ ಅವರು ಮೃತಪಟ್ಟಿರುತ್ತಾರೆ. ತಕ್ಷಣ ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Continue Reading