LATEST NEWS
ಕೊರೊನಾ ಗೆದ್ದ ಉಡುಪಿಯ 9 ಪೊಲೀಸರು …..!!

ಪೊಲೀಸರು ಕೊರೊನಾ ವಾರಿಯರ್ಸ್, ಅವರನ್ನು ಅಸ್ಪೃಶ್ಯರಂತೆ ನೋಡಬೇಡಿ: ಉಡುಪಿ ಡಿಸಿ
ಉಡುಪಿ ಜೂನ್ 4: ಉಡುಪಿಯಲ್ಲಿ ಕೊರೊನಾದಿಂದ ಬಳಲುತ್ತಿದ್ದ 9 ಮಂದಿ ಪೊಲೀಸರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಸಂದರ್ಭ ಕೊರೊನಾ ವಿರುದ್ಧದ ಹೋರಾಟದಲ್ಲಿ ಪೊಲೀಸರು ಯೋಧರಂತೆ ಕೆಲಸ ಮಾಡುತ್ತಿದ್ದು, ಸಾರ್ವಜನಿಕರು ಪೊಲೀಸರನ್ನು ಅಸ್ಪೃಶ್ಯರಂತೆ ನೋಡಬೇಡಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು 9 ಪೊಲೀಸರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಅವರ ಜೊತೆ ಕೆಲಸ ಮಾಡಿದ್ದ ಇತರೇ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಜಿಲ್ಲೆಯ ಜನ ಖಾಕಿ ಯುನಿಫಾರ್ಮ್ ನೋಡಿದಾಗ ದೂರ ಹೋಗುತ್ತಿದ್ದರು. ಗೆಳೆಯರು ಕೂಡಾ ಅಂತರ ಕಾಯ್ದು ಕೊಳ್ಳುತ್ತಿದ್ದರು ಎಂಬ ದೂರುಗಳು ಉಡುಪಿಯಲ್ಲಿ ಕೇಳಿಬಂದಿತ್ತು.

ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಉಡುಪಿ ಜಿಲ್ಲೆಯಲ್ಲಿ 9 ಪೊಲೀಸರಿಗೆ ಕೊರೊನಾ ಬಂದಿತ್ತು. ಇಡೀ ಜಿಲ್ಲೆಗೆ ಬಹಳ ಆತಂಕವಾಗಿತ್ತು. ಎಲ್ಲಾ 9 ಜನ ಪೊಲೀಸರು ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿದ್ದಾರೆ. ಪೊಲೀಸರು, ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಕೊರೊನಾ ವಾರಿಯರ್ಸ್‍ಗಳು. ಕೊರೊನಾ ವಾರಿಯರ್ಸ್‍ಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು. ಅಲ್ಲದೆ ಪೊಲೀಸರು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಮಾಡುವ ಯೋಧರು, ಪೊಲೀಸರ ಮೇಲೆ ಸಾರ್ವಜನಿಕರಿಗೆ ಹೆಚ್ಚು ಗೌರವ ಬರಬೇಕು ಎಂದು ತಿಳಿಸಿದರು.