LATEST NEWS
ಪೊಲೀಸರು ನನ್ನನ್ನು ಎಳೆದಾಡಿ ನೋವುಂಟು ಮಾಡಿದ್ದಾರೆ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ಚೈತ್ರಾ ಕುಂದಾಪುರ
ಬೆಂಗಳೂರು ಸೆಪ್ಟೆಂಬರ್ 13: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಹಿಂದೂ ನಾಯಕಿ ಚೈತ್ರಾ ಕುಂದಾಪರುರ ಸೇರಿದಂತೆ 6 ಮಂದಿ ಆರೋಪಿಗಳನ್ನು ನ್ಯಾಯಾಧೀಶರು 10 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದ್ದಾರೆ.
5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಚೈತ್ರಾ ಕುಂದಾಪುರ ಹಾಗೂ ಅವಳ ಗ್ಯಾಂಗ್ ನ್ನು ಬೆಂಗಳೂರಿನಲ್ಲಿ 1ನೇ ಎಸಿಎಂಎಂ ಕೋರ್ಟ್ ನಲ್ಲಿ ಹಾಜರುಪಡಿಸಲಾಗಿತ್ತು. ಈ ವೇಳೆ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಿಗೆ ಸಿಸಿಬಿ ಪೊಲೀಸರು ಮನವಿ ಮಾಡಿದ್ದರು. ಈ ವೇಳೆ ನ್ಯಾಯಾಧೀಶರ ಮುಂದೆ ಉಡುಪಿಯಲ್ಲಿ ಪೊಲೀಸರು ನನ್ನನ್ನು ಹಿಡಿದು ಎಳೆದಾಡಿ ನೋವು ಮಾಡಿದ್ದಾರೆ ಎಂದು ಚೈತ್ರಾ ಗಳಗಳನೇ ಕಣ್ಣೀರಿಟ್ಟಿದ್ದಾರೆ.
ಈ ಬಗ್ಗೆ ಪೊಲೀಸರನ್ನು ವಿಚಾರಿಸಿದಾಗ ಆರೋಪಿ ಹೇಳುವ ರೀತಿ ಯಾವುದೇ ತೊಂದರೆ ಕೊಟ್ಟಿಲ್ಲ ಎಂದು ಉಡುಪಿ ಠಾಣೆಯ ಎಸಿಪಿ ರೀನಾ ಸುವರ್ಣ ಹೇಳಿದ್ದಾರೆ. ಇನ್ನು ಬಂಧನದ ಬಗ್ಗೆ ಎಲ್ಲಾ ವಿಡಿಯೋ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಮೆಡಿಕಲ್ ರಿಪೋರ್ಟ್ ಕೂಡ ಮಾಡಿಸಲಾಗಿದೆ ಎಂದು ಎಸಿಪಿ ರೀನಾ ಸುವರ್ಣ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ವಿಚಾರಣೆ ಮಾಡಿದ ನ್ಯಾಯಾಧೀಶರು 10 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದ್ದಾರೆ. ಚೈತ್ರಾ, ರಮೇಶ್, ಧನರಾಜ್, ಪ್ರಜ್ವಲ್ ಹಾಗೂ ಶ್ರೀಕಾಂತ್ ಅವರನ್ನು ಬುಧವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. 2ನೇ ಆರೋಪಿ ಗಗನ್‌ನನ್ನು ಮಂಗಳವಾರವೇ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಗಗನ್ ಸೇರಿದಂತೆ ಆರು ಮಂದಿಯ ವಿಚಾರಣೆಯು 10 ದಿನಗಳ ಕಾಲ ಸಿಸಿಬಿ ಕಚೇರಿಯಲ್ಲಿ ನಡೆಯಲಿದೆ.