LATEST NEWS
ಉಡುಪಿ : ಕಿರಿಯ ಪೊಲೀಸ್ ಅಧಿಕಾರಿ ಹೃದಯಾಘಾತಕ್ಕೆ ಬಲಿ..!

ಉಡುಪಿ : ಉಡುಪಿಯಲ್ಲಿ ಕಿರಿಯ ಪೊಲೀಸ್ ಅಧಿಕಾರಿಯೋರ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಮೃತ ದುರ್ದೈವಿಯಾಗಿದ್ದಾರೆ.
ಅವರು ಸೋಮವಾರ ಬೆಳಿಗ್ಗಿನ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು. ರಾತ್ರಿ ಮನೆಯಲ್ಲಿ ಊಟದ ನಂತರ ಮಲಗಿದ್ದ ಇವರು ಬೆಳಗ್ಗೆ ನೋಡಲಾಗಿ ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ನಿತ್ಯಾನಂದ ಶೆಟ್ಟಿ ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅದಕ್ಕೂ ಮೊದಲು ಕರಾವಳಿ ಕಾವಲುಪಡೆಯಲ್ಲಿ ಸೇವೆ ಸಲ್ಲಿಸಿದ್ದರು. ನಿತ್ಯಾನಂದ ಶೆಟ್ಟಿ ಅವರ ನಿಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
