Connect with us

    KARNATAKA

    ಉಡುಪಿ ಪೊಲೀಸರ ಕಾರ್ಯಾಚರಣೆ,ಅಂತರ್ ಜಿಲ್ಲಾ ಕಳ್ಳ ಸೆರೆ- 46.67 ಲಕ್ಷ ರೂ. ಮೌಲ್ಯದ ಸೊತ್ತು ವಶ..!

    ಉಡುಪಿ: ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕದಿಯುತಿದ್ದ ಅಂತರ್ ಜಿಲ್ಲಾ ಕಳ್ಳನ್ನು ಬಂಧಿಸಿದ್ದಾರೆ. ಬಂಧಿತನಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

    ಬೆಂಗಳೂರಿನ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತ ಆರೋಪಿಯಾಗಿದ್ದು 60ಕ್ಕೂ ಹೆಚ್ಚು ಪ್ರಕರಣಗಳು ಈತನ ಮೇಲಿವೆ. ಈ ಕುರಿತು ಉಡುಪಿ ನಗರ ಠಾಣೆಯಲ್ಲಿ  ಕರೆದ ಸುದ್ದಗೋಷ್ಠಿಯಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ಮಾಹಿತಿ ನೀಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಭುವನೇಶ್ವರಿ ನಗರದ ನಿವಾಸಿ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತ ಆರೋಪಿ. ಬಂಧಿತನಿಂದ 31,55,930 ರೂ. ಮೌಲ್ಯದ 530 ಗ್ರಾಂ ಚಿನ್ನಾಭರಣ ಹಾಗೂ 15,12,000 ರೂ. ಮೌಲ್ಯದ 16.800 ಗ್ರಾಂ ಬೆಳ್ಳಿಯ ಆಭರಣಗಳನ್ನು ಮತ್ತು ಕಳವು ಮಾಡಲು ಬಳಸಿದ 2.50 ಲಕ್ಷ ರೂ. ಮೌಲ್ಯದ ಕಾರು, ನಕಲಿ ನಂಬರ್ ಪ್ಲೇಟ್ಗಳು ಮತ್ತು ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಅ.8ರಂದು ರಾತ್ರಿ ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲದಾಸ್ ನಾಯಕ್ ಎಂಬವರ ಮನೆಗೆ ನುಗ್ಗಿದ ಕಳ್ಳರು, ಒಟ್ಟು 73,06,800 ರೂ. ವೌಲ್ಯದ 1,882 ಗ್ರಾಂ ತೂಕದ ಚಿನ್ನಾಭರಣ ಹಾಗೂ 7450 ಗ್ರಾಂ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿಗೈದಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪ, ಉಡುಪಿ ನಗರ ಠಾಣಾ ಎಸ್ಸೈ ಪುನೀತ್ ಕುಮಾರ್ ಬಿ.ಇ. ಹಾಗೂ ಈರಣ್ಣ ಶಿರಗುಂಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದು, ಅದರಂತೆ ತಂಡವು ಅ.31ರಂದು ಆರೋಪಿ ಮಂಜುನಾಥನನ್ನು ಉಡುಪಿ ಉದ್ಯಾವರ ಸಮೀಪದ ಬಲಾಯಿ ಪಾದೆ ಬಳಿ ಕಾರು ಸಹಿತ ವಶಕ್ಕೆ ಪಡೆದಿದ್ದರು. ಉಳಿದ ಸೊತ್ತುಗಳನ್ನು ಇನ್ನೂ ವಶಪಡಿಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

    ಆರೋಪಿಯು ಬ್ರಹ್ಮಾವರ, ತರಿಕೆರೆ, ಅರಸಿಕೇರೆ ಮತ್ತು ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿಯೂ ಕೂಡಾ ಭಾಗಿಯಾಗಿದ್ದಾನೆ. ಈತನ ವಿರುದ್ಧ ಈಗಾಗಲೇ ಬೆಂಗಳೂರು, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಹೆಚ್ಟುವರಿ ಎಸ್ಪಿ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಉಡುಪಿ ಡಿವೈಎಸ್ಪಿ ದಿನಕರ ಪಿ.ಕೆ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪಡಿ.ಆರ್. ಉಪಸ್ಥಿತರಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *