ಕುಂದಾಪುರ ಫೆಬ್ರವರಿ 23: ಹೇರ್ ಡ್ರೆಸ್ ಅಂಗಡಿಯೊಂದರಲ್ಲಿ ಬಿಹಾರ ಮೂಲದ 11 ವರ್ಷದ ಬಾಲಕನೊಬ್ಬ ಪ್ರಚೋದನಕಾರಿಯಾಗಿ ಘೋಷಣೆ ಕೂಗುವ ವೀಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಚಾರದಲ್ಲಿ ಈಗಾಗಲೇ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿರುವುದರಿಂದ ಈ ವಿಡಿಯೋವನ್ನು ಸಾರ್ವಜನಿಕರು ಶೇರ್ ಮಾಡುವುದಾಗಲಿ ಅಥವಾ ಪೋಸ್ಟ್ ಮಾಡುವುದಾಗಲಿ ಮಾಡಬಾರದು. ಮಾಡಿದಲ್ಲಿ ಅವರ ವಿರುದ್ಧ ಐಟಿ ಕಾಯ್ದೆ, ಜೆಜೆ ಆಕ್ಟ್, ಇತರ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.