Connect with us

UDUPI

ಉಡುಪಿ ಮಾನ್ಸೂನ್ ಅಬ್ಬರಕ್ಕೆ 4 ಮನೆಗಳಿಗೆ ಹಾನಿ

ಉಡುಪಿ ಜೂನ್ 17: ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಕಳೆದ ಒಂದು ವಾರದಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸರಾಸರಿ 114 ಮಿಲಿ ಮೀಟರ್ ಮಳೆ ದಾಖಲಾಗಿದೆ.

ಉಡುಪಿ ನಗರ ಮತ್ತು ತಾಲೂಕಿನಲ್ಲಿ 121 ಮಿ.ಮೀ, ಕುಂದಾಪುರದಲ್ಲಿ 120 ಮಿ.ಮೀ ಮಳೆ ಬಿದ್ದಿದೆ. ಕಾರ್ಕಳ ತಾಲೂಕಿನಲ್ಲಿ 100 ಮಿಲಿ ಮೀಟರ್ ಮಳೆ ಸುರಿದಿದೆ. ಉಡುಪಿ ಜಿಲ್ಲಾಡಳಿತದಿಂದ ಮಳೆ ಮಾಹಿತಿ ಲಭ್ಯವಾಗಿದ್ದು, ಮುಂದಿನ 24 ಗಂಟೆಗಳ ಕಾಲ ಗುಡುಗು ಮಳೆ ಮುಂದುವರೆಯುವ ಸಾಧ್ಯತೆ ಇದೆ.


ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದ್ದು, ರಾತ್ರಿಪೂರ್ತಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾರಾಂತ್ಯದವರೆಗೆ ಭಾರೀ ಮಳೆ ಸಾಧ್ಯತೆಯಿದ್ದು, ಜಿಲ್ಲೆಯಾದ್ಯಂತ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ನದಿ ಸಮುದ್ರ ತೀರದ ಜನಕ್ಕೆ ಎಚ್ಚರಿಕೆ ರವಾನೆ ಮಾಡಲಾಗಿದೆ. ಇನ್ನು ಮಳೆಯಿಂದಾಗಿ ಜಿಲ್ಲೆಯಲ್ಲಿ ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಕಾಪು ತಾಲೂಕಲ್ಲಿ ಮೂರು ಮನೆಗಳ ಹಂಚು ಹಾರಿಹೋಗಿದ್ದು, ಎರ್ಲಪಾಡಿ ವ್ಯಾಪ್ತಿಯ ವಿಶ್ವನಾಥ ಎಂಬವರ ಮನೆ ಮೇಲೆ ಮರ ಬಿದ್ದಿದೆ.

Facebook Comments

comments