LATEST NEWS
ಭಾರಿ ಮಳೆ ಹಿನ್ನಲೆ ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪಿಯ ಕಾಲೇಜುಗಳಿಗೆ ರಜೆ

ಭಾರಿ ಮಳೆ ಹಿನ್ನಲೆ ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪಿಯ ಕಾಲೇಜುಗಳಿಗೆ ರಜೆ
ಉಡುಪಿ ಅಗಸ್ಟ್ 12: ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ಅಗಸ್ಟ್ 13 ರಂದು ಉಡುಪಿಯ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಕಡಲಿನಲ್ಲಿ ಅಬ್ಬರ ಹೆಚ್ಚಾಗಿದ್ದು ಮೀನುಗಾರರು ಕಡಲಿಗಿಳಿಯದಂತೆ ಮುನ್ಸೂಚನೆ ನೀಡಲಾಗಿದೆ.

ಕಡಲಿನ ತೆರೆಗಳ ಅಬ್ಬರ ಹೆಚ್ಚಾದ ಕಾರಣ ಎರಡು ಬೋಟುಗಳು ಮುಳುಗಡೆಯಾಗಿದ್ದು ೧೬ ಮೀನುಗಾರರನ್ನು ರಕ್ಷಿಸಲಾಗಿದೆ. ಮುಂದಿನ ಎರಡು ದಿನ ನಿರಂತರ ಮಳೆಯಾಗುವ ಸಾಧ್ಯತೆ ಇದ್ದು ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದೆ