LATEST NEWS
ಭಾರೀ ಮಳೆ ಹಿನ್ನಲೆ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪ.ಪೂ.ಕಾಲೇಜುಗಳಿಗೆ ನಾಳೆ (ಜುಲೈ 6) ರಜೆ ಘೋಷಣೆ

ಉಡುಪಿ ಜುಲೈ5: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಹಲವು ಪ್ರದೇಶಗಳು ಜಲಾವೃತವಾಗಿರುವ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳು ಅಲ್ಲದೇ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಇದಕ್ಕೆ ಮೊದಲು ಅತಿ ಹೆಚ್ಚು ಮಳೆ ಸುರಿಯುತ್ತಿರುವ ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಅವರು ಆದೇಶಿಸಿದ್ದರು.
