UDUPI
ಉಡುಪಿ ಬಿರುಗಾಳಿ ಜೊತೆ ಧಾರಾಕಾರ ಮಳೆ – ರೆಡ್ ಅಲರ್ಟ್ ಘೋಷಣೆ

ಉಡುಪಿ ಅಗಸ್ಟ್ 4: ಉಡುಪಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ವಿಪರೀತ ಮಳೆಯಿದ್ದು, ಸಂಜೆಯಾಗುತ್ತಿದ್ದಂತೆ ಭಾರೀ ಮಳೆ ಶುರುವಾಗಿದೆ. ಗಾಳಿ ಸಹಿತ ಮಳೆ ಬೀಳುತ್ತಿರುವುದರಿಂದ ನಗರಭಾಗದ ವಾಹನ ಸವಾರರು, ಪಾದಾಚಾರಿಗಳು ಓಡಾಡಲು ಪರದಾಡಿದ್ದಾರೆ.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಮಳೆ ಇನ್ನೆರಡು ದಿನ ಮುಂದುವರೆಯುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ, ನದಿ ಪಾತ್ರದ ಜನ ಎಚ್ಚರಿಕೆಯಲ್ಲಿರುವಂತೆ ಸಂದೇಶ ರವಾನಿಸಲಾಗಿದೆ.

Continue Reading