Connect with us

    LATEST NEWS

    ರೆಡ್ ಅಲರ್ಟ್ ಹಿನ್ನಲೆ ಜುಲೈ 19 ರಂದು ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ರಜೆ ಘೋಷಣೆ

    ಉಡುಪಿ ಜುಲೈ 18: ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಕೂಡ ಭಾರೀ ಗಾಳಿ ಜೊತೆ ಮಳೆಯಾಗಿದೆ. ಅಲ್ಲದೆ ನಾಳೆಯೂ ಮಳೆ ಮುಂದುವರೆಯಲಿದ್ದು, ಈಗಾಗಲೇ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ನಾಳೆ ಜುಲೈ 19 ರಂದು ಉಡುಪಿ ಜಿಲ್ಲೆಯಲ್ಲಿ ಪಿಯುಸಿಯವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.


    ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:18.07.2024ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:19.07.2024 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.

    ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

    ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಮರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.
    1 . ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
    2. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.
    3. ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
    4. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
    5. ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
    6. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು. ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
    7. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು.

    Share Information
    Advertisement
    Click to comment

    Leave a Reply

    Your email address will not be published. Required fields are marked *