Connect with us

  UDUPI

  ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆಗೆ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ

  ಉಡುಪಿ, ಜನವರಿ 09 : ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ವಿಜೃಂಭಣೆಯಿುಂದ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.


  ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುತ್ತಿದ್ದು, ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ ಎಂದರು.


  ಸಮಾರಂಭದಲ್ಲಿ ಪೊಲೀಸ್, ಅರಣ್ಯ, ಗೃಹ ರಕ್ಷಕ, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಲಿದ್ದು, ನಂತರ ಶಾಲಾ ವಿದ್ಯಾಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
  ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಸಿದ್ಧಪಡಿಸಿ, ಜನಪ್ರತಿನಿಧಿಗಳಿಗೆ, ಗಣ್ಯರಿಗೆ, ಸ್ವಾತಂತ್ರö್ಯ ಹೋರಾಟಗಾರರು ಹಾಗೂ ಅವರ ಕುಟುಂಬದವರಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು. ಕಾರ್ಯಕ್ರಮದಲ್ಲಿ ನಗರದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳು ತಪ್ಪದೇ ಭಾಗವಹಿಸಬೇಕು ಎಂದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
  ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

  Share Information
  Advertisement
  Click to comment

  You must be logged in to post a comment Login

  Leave a Reply